ಮಡಿಕೇರಿ: ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿನಯ್ ಸೋಮಯ್ಯ ಅವರನ್ನು ರೌಡಿಶೀಟ್ ಗೆ ಸೇರಿಸುವುದಾಗಿ ಬೆದರಿಕೆಯೊಡ್ಡಿದ ಪೊಲೀಸರ ಮೇಲೆ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಕಿಡಿಗೇಡಿಗಳು ಎಂದು ಅಪಪ್ರಚಾರ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿನಯ್ ಸೋಮಯ್ಯ ಅವರ ಸೋದರ ಜೀವನ್ ಅವರು ಮಂಗಳವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಬಿಜೆಪಿ ಮುಖಂಡ ಪ್ರತಾಪಸಿಂಹ, ಪ್ರಕರಣದ ಆರೋಪಿಯನ್ನು ಇನ್ನೂ ಬಂಧಿಸಿಲ್ಲ ಏಕೆ? ಯಾರ ಮಾತು ಕೇಳಿ ಯಾವ ಕಾರಣಕ್ಕೆ ರೌಡಿ ಶೀಟ್ ತೆಗೆಯಬೇಕು ಎಂದು ಪೊಲೀಸರು ಒತ್ತಡ ಹಾಕಿದ್ದರು ಎಂಬ ಪ್ರಶ್ನೆಗಳಿಗೆ ಉತ್ತರ ಬೇಕಿದೆ ಎಂದರು.