Wednesday, April 16, 2025
Google search engine

Homeರಾಜ್ಯನಾಳೆ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ

ನಾಳೆ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ

ಬೆಂಗಳೂರು: ಪರ-ವಿರೋಧದ ನಡುವೆ ಜಾತಿಜನಗಣತಿ ವರದಿ ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

2024ರ ಫೆಬ್ರವರಿ 29ರಂದು ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ದತ್ತಾಂಶಗಳ ಅಧ್ಯಯನ ವರದಿಯನ್ನ ಮುಚ್ಚಿದ ಲಕೋಟೆಯಲ್ಲಿ ಸರ್ಕಾರಕ್ಕೆ ಸಲ್ಲಿಸಿತ್ತು. ಇದೀಗ ವರದಿಯ ಲಕೋಟೆಯನ್ನು ತೆರೆದು ಪರೀಶೀಲಿಸಲು ಅನುಮೋದನೆ ಕೋರಿ ಮಂಡನೆಗೆ ಪ್ರಸ್ತಾಪಿಸಲಾಗಿದೆ.

ಹೆಚ್​ ಕಾಂತರಾಜ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗವು ಕಳೆದ 2015 ರ ಏಪ್ರಿಲ್​ 11ರಿಂದ ಮೇ. 30ರವರೆಗೆ ರಾಜ್ಯದಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಲಾಗಿತ್ತು. ಆ ಮೂಲಕ ಜಾತಿ ವಿವರವೂ ಒಳಗೊಂಡಂತೆ ಒಟ್ಟು 54 ಮಾನದಂಡಗಳಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತದ ಸಹಭಾಗಿತ್ವದಲ್ಲಿ ಸಮೀಕ್ಷೆ ನಡೆಸಿ ಮಾಹಿತಿ ಸಂಗ್ರಹಿಸಿ ಗಣಕೀಕರಣಗೊಳಿಸಲಾಗಿದೆ. ಈ ವರದಿ ನಾಳೆ ವಿಧಾನಸೌಧದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದೆ.

RELATED ARTICLES
- Advertisment -
Google search engine

Most Popular