Sunday, April 20, 2025
Google search engine

Homeಅಪರಾಧಕಾನೂನುಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ವಿವಾದ : ನಾಲ್ವರು ಅಧಿಕಾರಿಗಳ ವಿರುದ್ಧ ಎಫ್ ಐ...

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ವಿವಾದ : ನಾಲ್ವರು ಅಧಿಕಾರಿಗಳ ವಿರುದ್ಧ ಎಫ್ ಐ ಆರ್ದಾಖಲು

ಶಿವಮೊಗ್ಗ: ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆಯಲು ನಾಲ್ವರು ಬ್ರಾಹ್ಮಣ ವಿದ್ಯಾರ್ಥಿಗೆ ತಮ್ಮ ಪವಿತ್ರ ದಾರವನ್ನು (ಜನಿವಾರ) ತೆಗೆಯುವಂತೆ ಹೇಳಿದ ನಂತರ ಕರ್ನಾಟಕ ಸರ್ಕಾರವು ಟೀಕೆಗಳನ್ನು ಎದುರಿಸುತ್ತಿದ್ದು, ಘಟನೆ ಸಂಬಂಧ ನಾಲ್ವರು ಅಧಿಕಾರಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ.

ಜಿಲ್ಲಾ ಬ್ರಾಹ್ಮಣ ಮಹಾಸಭಾದಿಂದ ದೊಡ್ಡಪೇಟೆ ಠಾಣೆಗೆ ದೂರು ನೀಡಲಾಗಿದೆ. ಅವರ ದೂರು ಆಧರಿಸಿ ಪೊಲೀಸರು ಎಫ್ ಐ ಆರ್ ದಾಖಲು ಮಾಡಿದ್ದಾರೆ . ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ನಟರಾಜ್ ಭಾಗವತ್ ಅವರು ಸಿಇಟಿ ಪರೀಕ್ಷಾ ನಿಯೋಜಿತ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

ಘಟನೆ ಹಿನ್ನೆಲೆ

ತೀರ್ಥಹಳ್ಳಿಯ ಆದಿಚುಂಚನಗಿರಿ ಕಾಲೇಜಿನ ಸಿಇಟಿ ಪರೀಕ್ಷ ಕೇಂದ್ರದಲ್ಲಿ ನಿನ್ನೆ ಎರಡನೇ ದಿನದ ಸಿಇಟಿ ಪರೀಕ್ಷೆ ವೇಳೆ ಘಟನೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಗಾಯತ್ರಿ ದೀಕ್ಷೆ ಪಡೆದ ಜನಿವಾರವನ್ನು ತೆಗೆದಿಸಿದ್ದಕ್ಕೆ ಇದೀಗ ಆಕ್ರೋಶ ವ್ಯಕ್ತವಾಗಿದ್ದು, ಬ್ರಾಹ್ಮಣ ಮಹಾಸಭಾ ಮತ್ತು ವಿಪ್ರ ಸಂಘಟನೆ ಒಕ್ಕೂಟದಿಂದ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಇದೀಗ ಆಗ್ರಹಿಸಿದ್ದಾರೆ. ಪ್ರತಿಯೊಬ್ಬರಿಗೂ ಅವರದೇ ಆದಂತಹ ವೈಯಕ್ತಿಕ ಭಾವನೆಗಳಿರುತ್ತವೆ, ಈ ರೀತಿ ಮಾಡಿದವರ ವಿರುದ್ಧ ಸೂಕ್ತವಾದಂತಹ ಕ್ರಮ ಕೈಗೊಳ್ಳಿ ಎಂದು ಪರೀಕ್ಷಾ ಕೇಂದ್ರದ ಬಳಿ ಬ್ರಾಹ್ಮಣ ಮಹಾಸಭಾ ಮತ್ತು ವಿಪ್ರ ಸಂಘಟನೆ ಕೆಲವರು ಆಗ್ರಹಿಸಿದ್ದಾರೆ.

RELATED ARTICLES
- Advertisment -
Google search engine

Most Popular