ಬೆಂಗಳೂರು: ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣದಲ್ಲಿ ಹೊಸ ಬೆಳವಣಿಗೆ ಸಂಭವಿಸಿದ್ದು, ಅವರ ಪತ್ನಿ ಪಲ್ಲವಿ ಮತ್ತು ಪುತ್ರಿ ಕೃತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ತನಿಖೆ ಮಡಿವಾಳ ಎಸಿಪಿ ವಾಸುದೇವ್ ಅವರ ನೇತೃತ್ವದಲ್ಲಿ ನಡೆಯುತ್ತಿದೆ.
ಪಲ್ಲವಿ ಮತ್ತು ಕೃತಿಯನ್ನು ಮಡಿವಾಳ ಠಾಣೆಯಲ್ಲಿ ವಿಚಾರಣೆಗೊಳಪಡಿಸಲಾಗಿದ್ದು, ಬಳಿಕ ಮಹಿಳಾ ಸಾಂತ್ವನ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಇಬ್ಬರ ಮೊಬೈಲ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂಜೆ ಕೋರ್ಟ್‌ಗಿಂದು ಹಾಜರುಪಡಿಸಲಾಗುವುದು ಎಂದು ತಿಳಿದು ಬಂದಿದೆ.
ಪಲ್ಲವಿ ಚಾಕುವಿನಿಂದ ಇರಿದು ಓಂ ಪ್ರಕಾಶ್ ಅವರನ್ನು ಹತ್ಯೆಗೈದಿರುವುದಾಗಿ ಪ್ರಾಥಮಿಕ ಮಾಹಿತಿ ಲಭಿಸಿದೆ. ಮನೆಯ ಗ್ರೌಂಡ್ ಫ್ಲೋರ್ ಸೀಜ್ ಮಾಡಲಾಗಿದೆ, ಏಕೆಂದರೆ ಪತ್ತೆ ಗೊಂಡ ಸಾಕ್ಷ್ಯಗಳನ್ನು ರಕ್ಷಿಸುವ ಅಗತ್ಯವಿದೆ.