ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಗುಡುಗು, ಮಿಂಚು, ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಂಟೆಗೆ 30–50 ಕಿಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆ ಇದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಬೆಂಗಳೂರು, ಮೈಸೂರು, ಹಾಸನ, ಮಂಡ್ಯ, ತುಮಕೂರು, ಚಾಮರಾಜನಗರ ಸೇರಿದಂತೆ 24 ಜಿಲ್ಲೆಗಳಲ್ಲಿ ಏ.21 ಮತ್ತು 22ರಂದು ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಿಗೆ ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಏ.25 ಮತ್ತು 26 ರಂದು ಬೆಂಗಳೂರಿನಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ರಾಯಚೂರು, ಕೊಪ್ಪಳ , ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಜಿಲ್ಲೆಯಲ್ಲಿ ಒಣ ಹವೆ ಇರಲಿದ್ದು, ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಕಲ್ಲು ಜಿಲ್ಲೆಯ ಕೆಲವು ಕಡೆ ಗುಡಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.