Tuesday, April 22, 2025
Google search engine

Homeರಾಜ್ಯಸುದ್ದಿಜಾಲಅರ್ಹರಿಗೆ ಯೋಜನೆ ತಲುಪಲಿ: ಅಧಿಕಾರಿಗಳಿಗೆ ತಾ.ಪಂ. ಸಭೆಯಲ್ಲಿ ಆಡಳಿತಾಧಿಕಾರಿ ಕಿವಿಮಾತು

ಅರ್ಹರಿಗೆ ಯೋಜನೆ ತಲುಪಲಿ: ಅಧಿಕಾರಿಗಳಿಗೆ ತಾ.ಪಂ. ಸಭೆಯಲ್ಲಿ ಆಡಳಿತಾಧಿಕಾರಿ ಕಿವಿಮಾತು

ವರದಿ: ವಿನಯ್ ದೊಡ್ಡಕೊಪ್ಪಲು

ಕೆ.ಆರ್.ನಗರ : ಸರ್ಕಾರದ ಯೋಜನೆ ಗಳನ್ನು ಸಕಾಲದಲ್ಲಿ ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವ ಪ್ರಾಮಾಣಿಕ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಎಂದು ತಾ.ಪಂ. ಆಡಳಿತಾಧಿಕಾರಿ ಕೆ.ವಿ.ಪ್ರಭುಸ್ವಾಮಿ ಹೇಳಿದರು.

ಕೆ.ಆರ್.ನಗರ ಪಟ್ಟಣದ ತಾ.ಪಂ. ಕೃಷ್ಣರಾಜೇಂದ್ರ ಸಭಾಂಗಣದಲ್ಲಿ ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು ನಿಗಧಿತ ಅವಧಿಯೊಳಗೆ ಯೋಜನೆಗಳನ್ನು ಅನುಷ್ಠಾನಗೊಳಿಸದಿದ್ದರೆ ಅಂತಹವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಸರ್ಕಾರಿ ನೌಕರರು ಮತ್ತು ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪರಸ್ಪರ ಕೈ ಜೋಡಿಸಿ ಪ್ರಧಾನಮಂತ್ರಿ ಸುರಕ್ಷ ಯೋಜನೆಗೆ ನೊಂದಣಿ ಮಾಡಿಸಿ ಜನರಿಗೆ ಅನುಕೂಲ ಕಲ್ಪಿಸಿ ಕೊಡಬೇಕು ಎಂದು ಸಲಹೆ ನೀಡಿದರು.
ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲೂಕು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಸ್ವಚ್ಚವಾಗಿಟ್ಟುಕೊಳ್ಳುವುದರ ಜತೆಗೆ ಸುತ್ತ ಮುತ್ತಲ ಪ್ರದೇಶವನ್ನು ಚತನವಾಗಿಟ್ಟುಕೊಳ್ಳಬೇಕೆಂದು ಸೂಚಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಿಂಚಿನ ಸಂಚಾರ ನಡೆಸಿ ಸರ್ಕಾರಿ ಶಾಲೆಗಳನ್ನು ಬಿಟ್ಟಿರುವ ಮಕ್ಕಳನ್ನು ಗುರುತಿಸಿ ಮರು ದಾಖಲೆ ಮಾಡಬೇಕೆಂದು ನುಡಿದ ಆಡಳಿತಾಧಿಕಾರಿಗಳು ಈ ವಿಚಾರದಲ್ಲಿ ನಾನು ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ ಎಂದು ಭರವಸೆ ನೀಡಿದರು.

ಎರಡು ತಾಲೂಕಿನ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಮಾದರಿ ಅಂಗನವಾಡಿ ಕೇಂದ್ರ ಗಳ ಕಟ್ಟಡವನ್ನು ಮಾದರಿ ಎಂದು ನಿರ್ಮಾಣ ಮಾಡುತ್ತಿದ್ದರು ಅವುಗಳು ಮೂಲ ಆಶಯಕ್ಕೆ ತದ್ವಿರುದ್ಧವಾಗಿ ದ್ದು ಸಿಡಿಪಿಒ ಈ ಬಗ್ಗೆ ಗಮನ ಹರಿಸಬೇಕೆಂದರು.

ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಗಳಾದ ವಿ.ಪಿ.ಕುಲದೀಪ್, ಎ.ಎನ್‌.ರವಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಜೆ.ಮಲ್ಲಿಕಾರ್ಜುನ್, ತಾಲೂಕು ಆರೋಗ್ಯಾಧಿಕಾರಿ ಡಾ.ಡಿ.ನಟರಾಜು, ಬಿಇಒ ಆರ್.ಕೃಷ್ಣಪ್ಪ, ಸಿಡಿಪಿಒ ಸಿ.ಎಂ.ಅಣ್ಣಯ್ಯ, ಜಿ.ಪಂ.ಎಇಇ ಎಲ್.ವಿನುತ್, ಪಶು ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್, ಚೆಸ್ಕಂ ಎಇಇ ಅರ್ಕೇಶ್ ಮೂರ್ತಿ, ಸಮಾಜ ಕಲ್ಯಾಣಾಧಿಕಾರಿ ಶಂಕರ್ ಮೂರ್ತಿ, ಬಿಸಿಎಂ ಇಲಾಖೆಯ ಮೇಘನ ಸೇರಿದಂತೆ ಇತರ ಇಲಾಖಾಧಿಕಾರಿಗಳು ಹಾಜರಿದ್ದರು.

RELATED ARTICLES
- Advertisment -
Google search engine

Most Popular