ಬೆಂಗಳೂರು: ನಿವೃತ್ತ ಡಿಜಿಪಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಪಲ್ಲವಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸೋಮವಾರ ಆರೋಪಿ ಪಲ್ಲವಿ ಅವರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ, ಜರ್ಡ್ಜ್ ಜಿ.ಎ. ಲತಾದೇವಿ ಅವರು ಮೇ 3ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದರು.
ಈ ಹಿನ್ನೆಲೆಯಲ್ಲಿ ಪಲ್ಲವಿಯನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿದೆ.
ಈ ಪ್ರಕರಣದ ತನಿಖೆ ಮತ್ತಷ್ಟು ಗಂಭೀರ ತಿರುವು ಪಡೆಯುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.