Tuesday, April 22, 2025
Google search engine

Homeರಾಜ್ಯನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ : ಆರೋಪಿಗಳಿಂದ ತಪ್ಪೊಪ್ಪಿಗೆ : ಗೃಹ ಸಚಿವ...

ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ : ಆರೋಪಿಗಳಿಂದ ತಪ್ಪೊಪ್ಪಿಗೆ : ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಲಾಗಿದ್ದು, ಈಗಾಗಲೇ ವಿಚಾರಣೆಯಲ್ಲಿ ಓಂ ಪ್ರಕಾಶ್ ಪತ್ನಿ ಪಲ್ಲವಿ ಹಾಗೂ ಮಗಳು ಹತ್ಯೆ ಮಾಡಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಓಂ ಪ್ರಕಾಶ್ ಹತ್ಯೆ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸಿವ ನಿಟ್ಟಿನಲ್ಲಿ ತನಿಖೆ ಸಿಸಿಬಿಗೆ ವರ್ಗಾಯಿಸಲಾಗಿದೆ. ಪೊಲೀಸರು ಸೂಕ್ತ ತನಿಖೆ ನಡೆಸಲಿದ್ದಾರೆ. ಓಂ ಪ್ರಕಾಶ್ ಪತ್ನಿ ಪಲ್ಲವಿ ಹಾಗೂ ಮಗಳು ಹತ್ಯೆ ಮಾಡಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ. ಓಂ ಪ್ರಕಾಶ್ ಪತ್ನಿ ವಾಟ್ಸಪ್ ಮೆಸೇಜ್ ಗಳ ಬಗ್ಗೆ ನನಗೆ ಮಾಹಿತಿ ಇಲ್ಲ. ಪೊಲೀಸರು ಎಲ್ಲವನ್ನೂ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ನಿವೃತ್ತ ಡಿಜಿಪಿ `ಓಂ ಪ್ರಕಾಶ್ ಹತ್ಯೆ’ ಪ್ರಕರಣ `CCB’ ಗೆ ವರ್ಗಾಯಿಸಿ ಆದೇಶ

ನಿವೃತ್ತ ಐಜಿ ಮತ್ತು ಡಿಜಿಪಿ ಓಂ ಪ್ರಕಾಶ್ ಅವರನ್ನು ಪತ್ನಿಯೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದರು. ಈ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಿ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ.ದಯಾನಂದ್ ಆದೇಶಿಸಿದ್ದಾರೆ.

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ತನಿಖೆ ನಡೆಸಲು ಸಿಸಿಬಿ ತನಿಖೆಗೆ ವಹಿಸಿ ಆದೇಶಿಸಿರುವುದಾಗಿ ಹೇಳಿದ್ದಾರೆ.ಅಂದಹಾಗೇ ನಿನ್ನೆ ಹೆಚ್ ಎಸ್ ಆರ್ ಲೇಔಟ್ ನಲ್ಲಿರುವಂತ ಅವರ ಮನೆಯಲ್ಲಿ ರಕ್ತದ ಮಡುವಿನಲ್ಲಿ ಓಂ ಪ್ರಕಾಶ್ ಅವರ ಮೃತದೇಹ ಪತ್ತೆಯಾಗಿತ್ತು. ತನಿಖೆ ನಡೆಸಿದಂತ ಪೊಲೀಸರಿಗೆ ಸ್ಥಳದಲ್ಲಿ ಖಾರದಪುಡಿ ಡಬ್ಬಿ, ಚಾಕು ಪತ್ತೆಯಾಗಿತ್ತು.

ಈ ಸಂಬಂಧ ಪೊಲೀಸರು ಪತ್ನಿ ಪಲ್ಲವಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ನಿನ್ನೆ ಓಂ ಪ್ರಕಾಶ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

RELATED ARTICLES
- Advertisment -
Google search engine

Most Popular