ಹುಣಸೂರು: ವೀರನಹೊಸಹಳ್ಳಿ ಗೇಟ್‌ನಿಂದ ಮೂರ್ಕಲ್ ವರೆಗೆ ರಸ್ತೆ ಅಭಿವೃದ್ಧಿ ಕಾರ್ಯ ನಡೆಯುತ್ತಿರುವ ಹಿನ್ನೆಲೆ, ಏಪ್ರಿಲ್ 24ರವರೆಗೆ ನಾಲ್ಕು ದಿನಗಳ ಕಾಲ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.
12.5 ಅಡಿ ಅಗಲದ ರಸ್ತೆಯಲ್ಲಿ ಡಾಂಬರೀಕರಣ ನಡೆಯುತ್ತಿರುವುದರಿಂದ ವಾಹನಗಳ ಸಂಚಾರ ಕಾಮಗಾರಿ ಗುಣಮಟ್ಟಕ್ಕೆ ಅಡ್ಡಿಯಾಗಬಹುದೆಂದು ಲೋಕೋಪಯೋಗಿ ಇಲಾಖೆಯ ಎಇಇ ಯತೀಶ್ ತಿಳಿಸಿದ್ದಾರೆ.
ಸಾರ್ವಜನಿಕರು ಸಹಕಾರ ನೀಡಬೇಕೆಂದು ಮನವಿ ಮಾಡಲಾಗಿದೆ. ನಾಗರಹೊಳೆ ಹುಲಿಯೋಜನೆ ಕ್ಷೇತ್ರ ನಿರ್ದೇಶಕರಿಗೂ ಈ ಸಂಬಂಧ ಮಾಹಿತಿ ನೀಡಲಾಗಿದೆ.