ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 28 ಜನರು ಸಾವನ್ನಪ್ಪಿದ್ದು, ಐಸ್ ಕ್ರೀಂ ತಿನ್ನಲು ಹೋಗಿ ಕರ್ನಾಟಕದ 17 ಜನರು ಉಗ್ರರ ದಾಳಿಯಿಂದ ಬಚಾವ್ ಆಗಿದ್ದಾರೆ.
ಈ ಬಗ್ಗೆ ಜಮ್ಮು-ಕಾಶ್ಮೀರಕ್ಕೆ ಹೋಗಿದ್ದ ಕನ್ನಡತಿ ಸುಮನಾ ಭಟ್ ಹೇಳಿಕೆ ನೀಡಿದ್ದಾರೆ. ಸುಮನಾ ಭಟ್ ಸೇರಿ 17 ಮಂದಿ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ಹೋಗಿದ್ದರು. ನಾವು ದಾರಿ ಮಧ್ಯೆ ಐಸ್ ಕ್ರೀಂ ತಿನ್ನಲು ಗಾಡಿ ನಿಲ್ಲಿಸಿದ್ದೆವು. ಇದರಿಂದ ಪಹಲ್ಗಾಮ್ ತೆರಳಲು ತಡವಾಗಿತ್ತು. ಒಂದು ವೇಳೆ ಮುಂಚೆ ಹೋಗಿದ್ದರೆ ನಾವು ಕೂಡ ಬಲಿಯಾಗುತ್ತಿದ್ದೆವು. ಅದೃಷ್ಟವಶಾತ್ ನಾವೆಲ್ಲರೂ ಪಾರಾಗಿದ್ದೇವೆ. ನಮಗೆ ನಾಡಿದ್ದು ಫ್ಲೈಟ್ ಇದೆ, ನಾವು ಕರ್ನಾಟಕಕ್ಕೆ ವಾಪಸ್ ಆಗುತ್ತೇವೆ’’ ಎಂದು ಹೇಳಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸಕ್ಕೆ ಬೆಂಗಳೂರಿಗ ಬಲಿಯಾಗಿದ್ದು, ಸಾವಿನ ಸಂಖ್ಯೆ 28 ಕ್ಕೇರಿಕೆಯಾಗಿದೆ.
ರಾಜ್ಯ ಸರ್ಕಾರದಿಂದ ಸಹಾಯವಾಣಿ ಸಂಖ್ಯೆ ಬಿಡುಗಡೆ
ಕಾಶ್ಮೀರದ ಪಹಲ್‌ಗಾಮದಲ್ಲಿ ಉಗ್ರರ ದಾಳಿಯಿಂದ ಕನ್ನಡಿಗರಿಬ್ಬರು ಸಾವಿಗೀಡಾಗಿರುವುದು ವಿಷಾದನೀಯ ಸಂಗತಿ. ಆದ್ದರಿಂದ ಜಮ್ಮು-ಕಾಶ್ಮೀರದ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ರಾಜ್ಯಕ್ಕೆ ಮರಳಿತರಲು ರಾಜ್ಯ ಸರ್ಕಾರವು ಪ್ರಯತ್ನಿಸುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರದಿಂದ ಸಹಾಯವಾಣಿ ಸಂಖ್ಯೆ ಬಿಡುಗಡೆ ಮಾಡಲಾಗಿದೆ.
1. ಕರ್ನಾಟಕದಲ್ಲಿ ಪ್ರವಾಸ ನಿರ್ವಹಿಸುತ್ತಿರುವ ಪ್ರವಾಸಿ ಕಾರ್ಯಾಚರಣೆದಾರರು (Tour Operators & Travel Agents) ಮೂಲಕ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಈ ಕೆಳಕಂಡ ಸಹಾಯವಾಣಿಗೆ ನೀಡಬೇಕೆಂದು ಕೋರಿದೆ.
2. ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರವಾಸಿಗರ ಸಂಬಂಧಿಕರು ಅಥವಾ ಪರಿಚಯಸ್ಥರು ಪ್ರವಾಸಕ್ಕೆ ತೆರಳಿರುವವರ ವಿವರಗಳನ್ನು ಈ ಕೆಳಕಂಡ Helpline (ಸಹಾಯವಾಣಿಗೆ) ನೀಡಬೇಕೆಂದು ಕೋರಿದೆ.
080-43344334
080-43344335
080-43344336
080-43344342