ಬೆಂಗಳೂರು: ಪಹಲ್ಗಾಮ್ನಲ್ಲಿ ಉಗ್ರರು ನಡೆಸಿದ ದಾಳಿಯನ್ನು “ಅತ್ಯಂತ ಹೇಯ ಕೃತ್ಯ”ವೆಂದು ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಖಂಡಿಸಿದ್ದಾರೆ.
ಫೇಸ್ಬುಕ್ ಪೋಸ್ಟ್‌ನಲ್ಲಿ ಅವರು, ಈ ಕ್ರೌರ್ಯಕ್ಕೆ ಬಲಿಯಾದವರಿಗೆ ತೀವ್ರ ಸಂತಾಪ ಸೂಚಿಸಿದ್ದು, ಕರ್ನಾಟಕದ ಇಬ್ಬರು ಪ್ರವಾಸಿಗರ ಸಾವಿಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಭಗವಂತ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿರುವ ಖಾದರ್, ಕಣಿವೆ ರಾಜ್ಯದಲ್ಲಿ ಶಾಂತಿ ಸ್ಥಾಪನೆಯಾಗಲಿ ಹಾಗೂ ಅಲ್ಲಿ ಸಿಲುಕಿರುವ ಪ್ರವಾಸಿಗರು ಸುರಕ್ಷಿತವಾಗಿ ತಾಯ್ನಾಡಿಗೆ ಮರಳಲಿ ಎಂದು ಆಸೆ ವ್ಯಕ್ತಪಡಿಸಿದ್ದಾರೆ.