Friday, April 25, 2025
Google search engine

Homeರಾಜ್ಯಸುದ್ದಿಜಾಲಮಲೆ ಮಹದೇಶ್ವರ ಬೆಟ್ಟ ಇನ್ಮುಂದೆ ಪಾನ ಮುಕ್ತ: ಸಿಎಂ ಸಿದ್ದರಾಮಯ್ಯ ಘೋಷಣೆ

ಮಲೆ ಮಹದೇಶ್ವರ ಬೆಟ್ಟ ಇನ್ಮುಂದೆ ಪಾನ ಮುಕ್ತ: ಸಿಎಂ ಸಿದ್ದರಾಮಯ್ಯ ಘೋಷಣೆ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಇಂದು (ಏಪ್ರಿಲ್ 24) ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿ ಮಹತ್ವದ ವಿಚಾರಗಳ ಬಗ್ಗೆ ಸಭೆ ನಡೆಸಿದ್ದು, ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ಬ್ರೇಕ್​ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್​ ಸೂಚನೆ ನೀಡಿದರು.

ಈ ವೇಳೆ ಹಿಂದಿನ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಒಂದೂವರೆ ವರ್ಷದಿಂದ ಜಾರಿ ಆಗದೇ ಇರುವುದಕ್ಕೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರನ್ನು ತೀವ್ರವಾಗಿ ಪ್ರಶ್ನಿಸಿದರು. ಪ್ರವಾಸಿಗರ ಶೆಲ್ಟರ್ ಮತ್ತು ಶೌಚಾಲಯಗಳ ಕಾಮಗಾರಿ ಪೂರ್ಣಗೊಳ್ಳದ ಬಗ್ಗೆ ಸಿಎಂ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು. ಅಲ್ಲದೇ ಪ್ರಾಧಿಕಾರದ ಕೆಲಸ ಕಾರ್ಯಗಳು, ಕಾಮಗಾರಿಗಳು ಸೂಕ್ತವಾಗಿ, ವೇಗವಾಗಿ ನಡೆಯಲು ಒಬ್ಬ ಎಇಇಯನ್ನು ಪ್ರಾಧಿಕಾರಕ್ಕೇ ನೇಮಿಸಲು ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್ ಅವರಿಗೆ ಸೂಚಿಸಿದರು.

ಪ್ರಾಧಿಕಾರ ಮತ್ತು ಮಹದೇಶ್ವರ ಬೆಟ್ಟಕ್ಕೆ ಸೇರಿದ ಜಾಗದಲ್ಲಿ ನೆಲೆಸಿರುವ 13 ಕುಟುಂಬಗಳಿಗೆ ಪರ್ಯಾಯ ಸ್ಥಳ ಒದಗಿಸಿ ಸ್ಥಳಾಂತರಿಸುವ ಮತ್ತು ಉಳಿದಿರುವವರನ್ನು ಹಾಗೇ ಉಳಿಸಿ, ಹೊಸದಾಗಿ ವಾಣಿಜ್ಯ ಉದ್ದೇಶದ ನಿರ್ಮಾಣಗಳಿಗೆ ಅವಕಾಶ ಆಗದಂತೆ ಖಚಿತವಾಗಿ ತಡೆಯುವ ಬಗ್ಗೆ ಚರ್ಚೆ ನಡೆಸಿದ್ದು, ಪ್ರಾಧಿಕಾರದಲ್ಲಿ ಕೆಲಸ ಮಾಡುವ 66 ಕಾರ್ಮಿಕ ಕುಟುಂಬಗಳಿಗೆ ತಲಾ 20 ಲಕ್ಷ ರೂ. ವೆಚ್ಚದಲ್ಲಿ, ಒಟ್ಟು 12 ರಿಂದ13 ಕೋಟಿ ರೂಪಾಯಿ ವೆಚ್ಚದಲ್ಲಿ ಆದಷ್ಟು ಬೇಗ ನೂತನ ಮನೆ ಕಟ್ಟಿ ಕೊಡಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಮಲೈ ಮಹದೇಶ್ವರ ಬೆಟ್ಟದ ಪ್ರಸಾದ ಲಾಡುಗೆ, ತಿರುಪತಿ ದೇವಸ್ಥಾನದ ಮಾದರಿಯಲ್ಲಿ ನಂದಿನಿ ತುಪ್ಪ ಬಳಸಿ, ಪ್ರಸಾದದ ಗುಣಮಟ್ಟವನ್ನು ಇನ್ನಷ್ಟು ಉನ್ನತೀಕರಿಸುವುದು. ಮುಂದಿನ ದಿನಗಳಲ್ಲಿ 100 ಗ್ರಾಂ ತೂಕದ ಪ್ರಸಾದ ಲಾಡುವನ್ನು ಕೇವಲ 35 ರೂಪಾಯಿಗೆ ವಿತರಿಸುವ ಬಗ್ಗೆ ಸಭೆ ನಿರ್ಣಯಿಸಿತು.

RELATED ARTICLES
- Advertisment -
Google search engine

Most Popular