ಬೆಂಗಳೂರು:‘ನಾವೆಲ್ಲರೂ ಭಾರತೀಯರು, ಎಲ್ಲರ ಪ್ರಾಣವು ಮುಖ್ಯ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿಯ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಪಾಕಿಸ್ತಾನದ ವಿರುದ್ಧ ಕೇಂದ್ರ ಸರ್ಕಾರ ಕೈಗೊಳ್ಳುವ ನಿರ್ಣಯಗಳಿಗೆ ಬೆಂಬಲ ನೀಡಲು ತೀರ್ಮಾನಿಸಿದೆ ಎಂದು ತಿಳಿಸಿದರು.
ಸದಾಶಿವನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಭಾರತ ಉಳಿಯಬೇಕು ಎಂಬುದೇ ನಮ್ಮ ನಿಲುವು,” ಎಂದರು. ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತಿಯಿರಬೇಕಿತ್ತು ಎಂಬ ಖರ್ಗೆಯ ಅಭಿಪ್ರಾಯಕ್ಕೆ ಅವರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು. “ಮಾಧ್ಯಮಗಳು ದೇಶದಲ್ಲಿ ಶಾಂತಿ ಕಾಪಾಡಲು ಸಹಕರಿಸಬೇಕು,” ಎಂದು ವಿನಮ್ರ ಮನವಿಯನ್ನೂ ಸಲ್ಲಿಸಿದರು.