ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದಾಗ, ಬಿಜೆಪಿ ಮಹಿಳಾ ಕಾರ್ಯಕರ್ತರು ಕಪ್ಪುಪಟ್ಟಿ ಪ್ರದರ್ಶಿಸಿ ಧಿಕ್ಕಾರ ಕೂಗಿದ ಘಟನೆ ನಡೆದಿದೆ.
ಸಿಪಿಎಡ್ ಮೈದಾನದಲ್ಲಿ ನಡೆದ ಈ ಸಮಾವೇಶದ ವೇಳೆ ಪ್ರತಿಭಟನೆಯಿಂದ ಸಿಎಂ ಸಿದ್ದರಾಮಯ್ಯ ಗರಂ ಆಗಿ, ಕೆಲ ಕಾಲ ಭಾಷಣ ನಿಲ್ಲಿಸಿ ಪೊಲೀಸ್ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ನಂತರ ಭಾಷಣ ಮುಂದುವರೆಸಿದ ಅವರು “ನಾವು ಯಾರಿಗೂ ಹೆದರಲ್ಲ, ಜೈಭೀಮ್ ಜೈ ಬಾಪು ಜೈ ಕಾಂಗ್ರೆಸ್” ಎಂದು ಘೋಷಿಸಿದರು.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮಹಿಳಾ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು. ಇದರ ಬೆನ್ನಲ್ಲೇ ಕಾಂಗ್ರೆಸ್ ಮುಖಂಡರು ಬಿಜೆಪಿ ಕಾರ್ಯಕರ್ತರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.