Wednesday, April 30, 2025
Google search engine

Homeರಾಜ್ಯಸುದ್ದಿಜಾಲಮಂಗಳೂರು: ಮರವೂರು ಸೇತುವೆ ಬಳಿ ಅಕ್ರಮ ಮರಳುಗಾರಿಕೆಗೆ ಗಣಿ ಇಲಾಖೆಯ ದಾಳಿ

ಮಂಗಳೂರು: ಮರವೂರು ಸೇತುವೆ ಬಳಿ ಅಕ್ರಮ ಮರಳುಗಾರಿಕೆಗೆ ಗಣಿ ಇಲಾಖೆಯ ದಾಳಿ

ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರಿನ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮರವೂರು ರೈಲ್ವೆ ಸೇತುವೆಯ ಬಳಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದ ಗಣಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 150 ಮೆಟ್ರಿಕ್ ಟನ್ ಮರಳು, ಡೋಜರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ತಮಿಳುನಾಡು-ಕೇರಳ-ಮಂಗಳೂರಿನಿಂದ ಮರವೂರು ರೈಲ್ವೆ ಸೇತುವೆ ಮೂಲಕ ಕೊಂಕಣ ರೈಲು ಮಾರ್ಗದಲ್ಲಿ ಪ್ರತಿನಿತ್ಯ 50 ರೈಲುಗಳಲ್ಲಿ 40 ಸಾವಿರದಿಂದ 50 ಸಾವಿರ ಪ್ರಯಾಣಿಕರು ಪ್ರಯಾಣಿಸು ತ್ತಿದ್ದು, ಈ ರೈಲ್ವೆ ಟ್ರ್ಯಾಕ್‌ನ ಕೆಳಭಾಗದಲ್ಲೇ ನಿಯಮ ಮೀರಿ ಅಕ್ರಮ ಮರಳುಗಾರಿಕೆ ನಡೆಸಲಾಗುತ್ತಿತ್ತು ಎನ್ನಲಾಗಿದೆ.

ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿಯಮದ ಪ್ರಕಾರ ಸೇತುವೆಯ ಎರಡೂ ಭಾಗದ ತಲಾ 100 ಮೀ. ವ್ಯಾಪ್ತಿಯಲ್ಲಿ ಮರಳುಗಾರಿಕೆ ನಡೆಸುವಂತಿಲ್ಲ. ಆದರೆ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಎಂ.ಸಿ. ಕೃಷ್ಣವೇಣಿ ಮಾರ್ಗದರ್ಶನದಂತೆ ಗಣಿ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ವರ್ಗವು ದಾಳಿ ನಡೆಸಿದೆ.

RELATED ARTICLES
- Advertisment -
Google search engine

Most Popular