Tuesday, May 6, 2025
Google search engine

Homeರಾಜ್ಯSSLC ಫಲಿತಾಂಶ: ಶೇ.62.34ರಷ್ಟು ವಿದ್ಯಾರ್ಥಿಗಳು ತೇರ್ಗಡೆ;ದಕ್ಷಿಣ ಕನ್ನಡ ಮೊದಲ ಸ್ಥಾನ; ಕಲಬುರಗಿಗೆ ಕೊನೆಯ ಸ್ಥಾನ

SSLC ಫಲಿತಾಂಶ: ಶೇ.62.34ರಷ್ಟು ವಿದ್ಯಾರ್ಥಿಗಳು ತೇರ್ಗಡೆ;ದಕ್ಷಿಣ ಕನ್ನಡ ಮೊದಲ ಸ್ಥಾನ; ಕಲಬುರಗಿಗೆ ಕೊನೆಯ ಸ್ಥಾನ

ಬೆಂಗಳೂರು:  2024-25ನೇ ಸಾಲಿನ SSLC-1 ವಾರ್ಷಿಕ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಈ ವರ್ಷ ಶೇ. 66.14ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೆಂಗಳೂರಿನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB)ಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ SSLC ಫಲಿತಾಂಶದ ವಿವಿರ ನೀಡಿದರು. ಇಂದು ಮಧ್ಯಾಹ್ನ 12.30ರ ನಂತರ ಇಲಾಖೆಯ ವೆಬ್ ಸೈಟ್ ಗಳಲ್ಲಿ ಫಲಿತಾಂಶಗಳನ್ನು ವೀಕ್ಷಿಸಬಹುದು.

ಈ ಬಾರಿ ಶೇ.62.34ರಷ್ಟು ಫಲಿತಾಂಶ ಪ್ರಕಟವಾಗಿದೆ. ದಕ್ಷಿಣ ಕನ್ನಡ ಮೊದಲ ಸ್ಥಾನ-91.12%. ಎರಡನೇ ಸ್ಥಾನ ಉಡುಪಿ-89.96% 3ನೇ ಸ್ಥಾನ ಉತ್ತರ ಕನ್ನಡ-83.19%. ಕಲಬುರಗಿಗೆ ಕೊನೆಯ ಸ್ಥಾನ-42.42% ಲಭ್ಯವಾಗಿದೆ.

ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ರಾಜ್ಯಾದ್ಯಂತ ಸುಮಾರು 8.96 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.  4,61,563 ಬಾಲಕರು ಮತ್ತು 4,34,884 ಬಾಲಕಿಯರು ಪರೀಕ್ಷೆ ಬರೆದಿದ್ದರು.

22 ವಿದ್ಯಾರ್ಥಿಗಳು 625ರಲ್ಲಿ 625 ಅಂಕಗಳನ್ನು ಪಡೆದಿದ್ದಾರೆ. ಇವರಲ್ಲಿ ‌ ಕನ್ನಡ ಮತ್ತು ಉರ್ದು ಮಾಧ್ಯಮದ ಎರಡು ಸರಕಾರಿ ಶಾಲೆಗಳ ವಿದ್ಯಾರ್ಥಿಗಳು ಸೇರಿದ್ದಾರೆ.

RELATED ARTICLES
- Advertisment -
Google search engine

Most Popular