ಬೆಂಗಳೂರು : ಶಾಸಕ ಸ್ಥಾನಕ್ಕೆ ಶಿವಾನಂದ ಎಸ್. ಪಾಟೀಲ ರಾಜೀನಾಮೆ ಸಲ್ಲಿಸಿದ್ದಾರೆ. ಬಸವನ ಬಾಗೇವಾಡಿ ವಿಧಾನ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಶಿವಾನಂದ ಎಸ್. ಪಾಟೀಲ ಅವರು ಸ್ವೀಕರ್ ಯು ಟಿ ಖಾದರ್ ಅವರನ್ನು ಭೇಟಿಯಾಗಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜೀನಾಮೆ ಪತ್ರದಲ್ಲೇನಿದೆ?
ವಿಜಯಪುರ ಶಾಸಕರಾದ ಶ್ರೀ ಬಸನಗೌಡ ಆರ್ ಪಾಟೀಲ(ಯತ್ನಾಳ್) ಅವರು ತಮ್ಮ ವಿಜಯಪುರ ಮತಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ನನ್ನ ವಿರುದ್ಧ ಬಸವನ ಬಾಗೇವಾಡಿ ಮತ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿದ್ದಾರೆ. ನಾನು ಅವರ ಸವಾಲನ್ನು ಸ್ವೀಕರಿಸಿ, ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಹಾಗಾಗಿ ನಾನು ಪ್ರತಿನಿಧಿಸುತ್ತಿರುವಾ ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ.
ಆದುದರಿಂದ ಶ್ರೀ ಬಸನಗೌಡ ಆರ್ ಪಾಟೀಲ(ಯತ್ನಾಳ್) ಅವರು ಸವಾಲು ಹಾಕಿರುವಂತೆ ಅವರ ಶಾಸಕ ಸ್ಥಾನ್ಕಕೆ ರಾಜೀನಾಮೆ ಸಲ್ಲಿಸಿ, ಅವರ ರಾಜೀನಾಮೆ ಅಂಗೀಕಾರಾದರೆ ಮಾತ್ರ ನನ್ನ ರಾಜೀನಾಮೆಯನ್ನು ಅಂಗೀಕರಿಸುವಂತೆ ತಮ್ಮಲ್ಲಿ ಕೋರುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.