ಕಲಬುರಗಿ: ಕಲಬುರಗಿಯ ಖಾಸಗಿ ಶಾಲೆಯಲ್ಲಿ ನಡೆದ NEET ಪರೀಕ್ಷೆಯಲ್ಲಿ ವಿದ್ಯಾರ್ಥಿ ಶ್ರೀಪಾದ್ ಪಾಟೀಲ್ ಅವರ ಜನಿವಾರವನ್ನು ಅಧಿಕಾರಿಗಳು ತೆಗೆಸಿದ ಘಟನೆ ಮುನ್ನೆತ್ತಿದೆ. ಪರೀಕ್ಷಾ ಕೇಂದ್ರದ ಒಳಗೆ ಹೋಗುವಾಗ, ಅಧಿಕಾರಿಗಳು ಜನಿವಾರ ತೆಗೆಯುವಂತೆ ಸೂಚಿಸಿದರು.
ಶ್ರೀಪಾದ್ ಅವರು ಸೂಚನೆಯಂತೆ ಜನಿವಾರ ತೆಗೆದು ಪರೀಕ್ಷೆ ಬರೆದಿದ್ದಾರೆ. ಈ ಘಟನೆಗೆ ತೀವ್ರ ಪ್ರತಿರೋಧ ವ್ಯಕ್ತವಾಗಿದ್ದು, ಬ್ರಾಹ್ಮಣ ಸಮಾಜದವರು ಪರೀಕ್ಷಾ ಕೇಂದ್ರದ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು “ಅಧಿಕಾರಿಯನ್ನ ನಮಗೆ ಒಪ್ಪಿಸಬೇಕು” ಎಂದು ಆಗ್ರಹಿಸಿದರು. ಅವರು ಟೈರ್ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಈ ಪ್ರತಿಭಟನೆಯಲ್ಲಿ ಎಬಿವಿಪಿ ಕಾರ್ಯಕರ್ತರೂ ಪಾಲ್ಗೊಂಡಿದ್ದರು. ಇತ್ತೀಚಿನ ಸಿಇಟಿ ಪರೀಕ್ಷೆಯಲ್ಲಿಯೂ ಇಂತಹ ಘಟನೆ ನಡೆದಿದ್ದು, ಇದು ರಾಜ್ಯದಾದ್ಯಂತ ಬ್ರಾಹ್ಮಣ ಸಮುದಾಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.