Tuesday, May 6, 2025
Google search engine

Homeರಾಜ್ಯರಾಜ್ಯ ಸರ್ಕಾರದಿಂದ 75 ವರ್ಷ ಮೇಲ್ಪಟ್ಟವರಿಗೆ ಮನೆ ಬಾಗಿಲಿಗೆ ಪಡಿತರ ವಿತರಣೆ: ಸಚಿವ ಕೆ.ಹೆಚ್.‌...

ರಾಜ್ಯ ಸರ್ಕಾರದಿಂದ 75 ವರ್ಷ ಮೇಲ್ಪಟ್ಟವರಿಗೆ ಮನೆ ಬಾಗಿಲಿಗೆ ಪಡಿತರ ವಿತರಣೆ: ಸಚಿವ ಕೆ.ಹೆಚ್.‌ ಮುನಿಯಪ್ಪ

ಬೆಂಗಳೂರು : ರಾಜ್ಯ ಸರ್ಕಾರವು ಹಿರಿಯ ನಾಗರಿಕರಿಗೆ ಸಿಹಿಸುದ್ದಿ ನೀಡಿದ್ದು, ಅನ್ನ ಸುವಿಧಾ ಯೋಜನೆಯಡಿ 75 ವರ್ಷ ಮೇಲ್ಪಟ್ಟವರಿಗೇ ಮನೆ ಬಾಗಿಲಿಗೆ ಪಡಿತರ ವಿತರಣೆ ಮಾಡಲಾಗುವುದು ಎಂದು ಸಚಿವ ಕೆ.ಹೆಚ್.‌ ಮುನಿಯಪ್ಪ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಆಹಾರ ಇಲಾಖೆ ಪ್ರಗತಿ ಪರಿಶೀಲನೆ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮಾತನಾಡಿದ ಅವರು, ಮನೆ ಬಾಗಿಲಿಗೆ ಪಡಿತರ ತಲುಪಿಸುವ ಅನ್ನ ಸುವಿಧಾ ಯೋಜನೆಯನ್ನು ವಿಸ್ತರಿಸಲು ಆಹಾರ ಇಲಾಖೆ ತೀರ್ಮಾನಿಸಿದ್ದು, 75 ವರ್ಷ ಮೇಲ್ಪಟ್ಟವರು ಯೋಜನೆಯ ಫಲಾನುಭವಿಗಳಾಗಲಿದ್ದಾರೆ. 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮಾತ್ರ ಇರುವ ಮನೆಗಳಿಗೆ ಆಹಾರ ಧಾನ್ಯಗಳನ್ನು ತಲುಪಿಸಲು ಹಿಂದಿನ ವರ್ಷ ‘ಅನ್ನ-ಸುವಿಧಾ’ ಯೋಜನೆ ಜಾರಿಗೊಳಿಸಲಾಗಿತ್ತು. ಇದೀಗ 75 ವರ್ಷ ಮೇಲ್ಪಟ್ಟವರ ಮನೆ ಬಾಗಿಲಿಗೆ ಪಡಿತರ ತಲುಪಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.

2023ರ ಮಾರ್ಚ್ ಅಂತ್ಯದವರೆಗೆ ಸಲ್ಲಿಕೆಯಾದ ಅರ್ಜಿಗಳ ವಿಲೇವಾರಿಗೆ ಕ್ರಮ ಕೈಗೊಂಡು ಅರ್ಹರಿಗೆ ಹೊಸ ಪಡಿತರ ಚೀಟಿ ವಿತರಿಸಬೇಕು. ಸರ್ಕಾರದ ಅನುಮತಿ ಪಡೆದ ನಂತರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಧ್ಯ ಹೊಸದಾಗಿ ಪಡಿತರ ಚೀಟಿಗೆ ಅರ್ಜಿಗಳನ್ನು ಆಹ್ವಾನಿಸಿಲ್ಲ, ಅನ್ನ ಸುವಿಧಾ ಯೋಜನೆಯಲ್ಲಿ ಮನೆಗಳಿಗೆ ಆಹಾರ ಧಾನ್ಯ ತಲುಪಿಸಲು ಕ್ರಮ ಕೈಗೊಳ್ಳಲಾಗಿದ್ದು, 2 ಲಕ್ಷ ಫಲಾನುಭವಿಗಳನ್ನು ಗುರುತಿಸಲಾಗಿದೆ. 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮಾತ್ರ ಇರುವ ಮನೆಗಳಿಗೂ ಈ ಸೇವೆ ವಿಸ್ತರಿಸಬೇಕು ಇದರಿಂದ 3.30 ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಲಿದೆ ಎಂದರು.

RELATED ARTICLES
- Advertisment -
Google search engine

Most Popular