ಶಿವಮೊಗ್ಗ: ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ನಡೆದ ಆಪರೇಷನ್ ಸಿಂಧೂರ ಯಶಸ್ವಿಯಾದ ಹಿನ್ನೆಲೆಯಲ್ಲಿ ಭಾರತೀಯ ಸೇನೆಗೆ ಬೆಂಬಲ ಸೂಚಿಸಿ ಬಿಜೆಪಿ ತಿರಂಗಯಾತ್ರೆ ಆಯೋಜಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.
ನಾಳೆ ಬೆಂಗಳೂರು, ಮೇ 15ರಂದು ಮಂಗಳೂರು ಮತ್ತು ಮೈಸೂರು, ಮೇ 16ರಂದು ಶಿವಮೊಗ್ಗದಲ್ಲಿ ತಿರಂಗಯಾತ್ರೆ ನಡೆಯಲಿದೆ. ಭಾರತೀಯ ಸೇನೆ ಪಾಕಿಸ್ತಾನದೊಳಗೆ ನುಗ್ಗಿ ಉಗ್ರರ ಅಡಗುತಾಣದ ಮೇಲೆ ದಾಳಿ ನಡೆಸಿ ಎಂಟು ಪ್ರಮುಖ ಉಗ್ರರನ್ನು ಹತ್ಯೆ ಮಾಡಿದೆ. ವಿಜಯೇಂದ್ರ ಅವರು ಸೇನೆಯ ಶೌರ್ಯಕ್ಕೆ ಅಭಿನಂದನೆ ಸಲ್ಲಿಸಿದರು.