ಮೈಸೂರು ಇದ್ರಿಷ್ ಪಾಷಾ ಸಾವಿಗೆ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ ಎಂದು ಹಿಂದೂ ಪರ ಮುಖಂಡ ಪುನೀತ್ ಕೆರೆಹಳ್ಳಿಗೆ ಬೆದರಿಕೆ ಕರೆ ಬಂದಿದ್ದು, ಎಫ್ ಐಆರ್ ದಾಖಲಾಗಿದೆ.
ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಎಫ್ ಐಆರ್ ದಾಖಲಾಗಿದೆ. ವಾಟ್ಸಪ್ ಕರೆ ಮಾಡಿ ಇದ್ರಿಷ್ ಪಾಷಾ ಸಾವಿಗೆ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ ಎಂದು ಬೆದರಿಕೆ ಕರೆ ಬಂದಿದ್ದು, ಕೋರ್ಟ್ ಅನುಮತಿ ಪಡೆದು ಅಕ್ರಮ ಖಾನ್ ಎಂಬುವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಇದ್ರಿಷ್ ಪಾಷಾ ಸಾವಿಗೆ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ, Next You ಎಂದು ಬೆದರಿಕೆ ಹಾಕಿದ್ದಾರೆ ಎಂದು ಪುನೀತ್ ಕೆರೆಹಳ್ಳಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.