ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಿಜಯನಗರದ ಹೊಸಪೇಟೆಯಲ್ಲಿ ನಡೆಯಲಿರುವ ಸಾಧನಾ ಸಮಾವೇಶದ ಬಗ್ಗೆ ಶಾಸಕ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ತೀವ್ರ ಟೀಕೆ ಮಾಡಿದ್ದಾರೆ.
“ಸಿಎಂ ಸಿದ್ದರಾಮಯ್ಯ ತಮ್ಮ ಸ್ವಂತ ಜಿಲ್ಲೆಯಲ್ಲಿ ಏನು ಸಾಧನೆ ಮಾಡಿದ್ದಾರೆ? ಹೆಲಿಕಾಪ್ಟರ್‌ನಲ್ಲಿ ಓಡಾಡಿದ್ದೇ ಸಾಧನೆ ಅಂತಾ? ಅದಕ್ಕೆ ಎಷ್ಟು ಖರ್ಚಾಗಿದೆ ಎಂಬುದನ್ನು ಸಮಾವೇಶದಲ್ಲಿ ಹೇಳಲಿ. ಮುಡಾ ಹಗರಣದ ಬಗ್ಗೆ ಸ್ಪಷ್ಟತೆ ನೀಡಲಿ, ಇಲ್ಲದಿದ್ದರೆ ನಾವು ವೈಫಲ್ಯವನ್ನು ಜನರಿಗೆ ತೋರಿಸುತ್ತೇವೆ” ಎಂದು ಎಚ್ಚರಿಸಿದರು.