Saturday, June 7, 2025
Google search engine

Homeರಾಜ್ಯಕಾಲ್ತುಳಿತ ದುರಂತ: ರಾಜ್ಯ ಸರ್ಕಾರ ವಿಫಲವಾಗಿದೆ: ಪ್ರಹ್ಲಾದ್ ಜೋಶಿ ವಾಗ್ದಾಳಿ

ಕಾಲ್ತುಳಿತ ದುರಂತ: ರಾಜ್ಯ ಸರ್ಕಾರ ವಿಫಲವಾಗಿದೆ: ಪ್ರಹ್ಲಾದ್ ಜೋಶಿ ವಾಗ್ದಾಳಿ

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ಸಮಯದಲ್ಲಿ ಸಂಭವಿಸಿದ ಕಾಲ್ತುಳಿತದ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿದ್ದು, “ಕರ್ನಾಟಕ ರಾಜ್ಯ ಸರ್ಕಾರವು ತನ್ನ ಜವಾಬ್ದಾರಿಯನ್ನು ನಿಭಾಯಿಸುವುದರಲ್ಲಿ ವಿಫಲವಾಗಿದೆ” ಎಂದು ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದಲ್ಲಿ ಸುಮಾರು 11 ಜನರು ಸಾವನ್ನಪ್ಪಿರುವುದು ಹಾಗೂ ಸುಮಾರು 30 ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವುದು ನಿಜಕ್ಕೂ ದುರಂತದ ವಿಷಯ. ಸೂಕ್ತ ವ್ಯವಸ್ಥೆಗಳು, ಯೋಜನೆ ಮತ್ತು ಜನಸಂದಣಿಯ ನಿರ್ವಹಣೆ ಮಾಡದ ಪರಿಣಾಮ ಇಂತಹ ಹೃದಯವಿದ್ರಾವಕ ಘಟನೆ ನಡೆದಿದೆ. ಕರ್ನಾಟಕ ರಾಜ್ಯ ಸರ್ಕಾರವು ತನ್ನ ಜವಾಬ್ದಾರಿಯನ್ನು ನಿಭಾಯಿಸುವುದರಲ್ಲಿ ವಿಫಲವಾಗಿದೆ” ಎಂದು ಕಿಡಿಕಾರಿದ್ದಾರೆ.

“ಸಂಭ್ರಮಾಚರಣೆಗಳು ನಡೆಯುತ್ತದೆ, ಆದರೆ ರಾಜ್ಯ ಸರ್ಕಾರವು ಸರಿಯಾದ ರೂಪುರೇಷ ಹಾಗೂ ತಯಾರಿ ಮಾಡಿಕೊಳ್ಳದೇ ಇರುವುದು ಇಂತಹ ದುರಂತಕ್ಕೆ ಕಾರಣವಾಗಿದೆ. ತುರ್ತು ಸೇವೆಗಳನ್ನು ನಿಯೋಜಿಸದೆ ಇರುವುದು ಅತ್ಯಂತ ಬೇಜವಾಬ್ದಾರಿ. ಈ ಕೆಟ್ಟ ಘಟನೆಯನ್ನು ತಪ್ಪಿಸಬಹುದಿತ್ತು. ಆದರೆ ಸರ್ಕಾರದ ವೈಫಲ್ಯವೇ ಇದಕ್ಕೆ ಕಾರಣ ಮತ್ತು ಹೊಣೆಗಾರಿಕೆಯನ್ನು ಸರ್ಕಾರವೇ ತಗೆದುಕೊಳ್ಳಬೇಕಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED ARTICLES
- Advertisment -
Google search engine

Most Popular