ಬೆಂಗಳೂರು : ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆಯಲ್ಲಿ ಭೀಕರ ಕಾಲ್ತುಳಿತ ಸಂಭವಿಸಿತು. ಈ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಗಂಭೀರವಾಗಿ ಕ್ರಮ ತೆಗೆದುಕೊಂಡಿದ್ದು, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಸೇರಿದಂತೆ ಕೆಲವು ಅಧಿಕಾರಿಗಳನ್ನು ಅಮಾನತು ಮಾಡಿದೆ. ಇದಕ್ಕೂ ಮುನ್ನ, ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಕಾಲ್ತುಳಿತಕ್ಕೆ ಗುಪ್ತಚರ ಇಲಾಖೆಯ ವೈಫಲ್ಯವೇ ಕಾರಣ ಎಂದು ಆರೋಪಗಳು ಕೇಳಿ ಬಂದಿವೆ.