ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಶುಕ್ರವಾರ ಐದು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾಯಿಸಿ ಆದೇಶ ಹೊರಡಿಸಿದೆ. ಗುಪ್ತಚರ ವಿಭಾಗದ ಎಡಿಜಿಪಿ ಹೇಮಂತ್ ಎಂ. ನಿಂಬಾಳ್ಕರ್ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ವರ್ಗಾಯಿಸಲಾಗಿದೆ. ಎಸ್. ರವಿ ಅವರು ನಿಂಬಾಳ್ಕರ್ ಅವರ ಸ್ಥಾನಕ್ಕೆ ನೂತನ ಎಡಿಜಿಪಿಯಾಗಿ ನಿಯುಕ್ತಿಯಾಗಿದ್ದಾರೆ.
ಆರ್. ಹಿತೇಂದ್ರ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿಯಾಗಿ ನೇಮಕ ಮಾಡಲಾಗಿದೆ. ಎಸ್. ಮುರುಗನ್ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆಯಾಗಿದ್ದಾರೆ. ಕೆ.ವಿ. ಶರತ್ ಚಂದ್ರ ಅವರು ಪೊಲೀಸ್ ದೂರು ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾಯಿಸಲ್ಪಟ್ಟಿದ್ದು, ಅವರಿಗೆ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ನಿಗಮದ ಹೆಚ್ಚುವರಿ ಹೊಣೆಗಾರಿಕೆಯನ್ನು ನೀಡಲಾಗಿದೆ.