Tuesday, June 10, 2025
Google search engine

Homeರಾಜ್ಯಆ.15ರ ಬಳಿಕ ರಾಜ್ಯದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಸುವಂತಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಆ.15ರ ಬಳಿಕ ರಾಜ್ಯದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಸುವಂತಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದ ದೇವಸ್ಥಾನಗಳಲ್ಲಿ ಆಗಸ್ಟ್.15ರಿಂದ ಪ್ಲಾಸ್ಟಿಕ್ ಬಳಕೆಯನ್ನು ಮಾಡುವಂತಿಲ್ಲ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಕಳೆದ ಮೂರು ತಿಂಗಳಲ್ಲಿ 1,253 ದೇವಾಲಯಗಳನ್ನು ಗುರುತಿಸಲಾಗಿದೆ. 11,322 ಆಸ್ತಿ ಗುರುತಿಸಿ ನಮೂದಿಸಲಾಗಿದೆ ಎಂದರು.

ಹೊರರಾಜ್ಯಗಳಲ್ಲಿ ವಸತಿ ಗೃಹಗಳನ್ನು ನಿರ್ಮಿಸಲು ಯೋಜಿಸಲಾಗಿದೆ. ತಿರುಪತಿಯ ಗಾಂಧಿ ರಸ್ತೆಯಲ್ಲಿರುವ ಜಾಗದಲ್ಲಿ ವಸತಿಗೃಹ ನಿರ್ಮಿಸಲಾಗುತ್ತಿದೆ. ವಸತಿಗೃಹ ಸಂಕೀರ್ಣ ನಿರ್ಮಾಣ ಮಾಡಲು ಸೂಚಿಸಲಾಗಿದೆ ಎಂದರು.

ದೇವಾಲಯದ ಅರ್ಚಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ಸೌಲಭ್ಯ ಕಲ್ಪಿಸಲಾಗಿದೆ. ಅರ್ಚಕರ 249 ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗಿದೆ. ಅರ್ಚಕರ ಮಕ್ಕಳ ವಿದ್ಯಾರ್ಥಿ ವೇತನಕ್ಕೆ ರೂ.34,37,000 ನೀಡಲಾಗಿದೆ. ಮರಣ ಹೊಂದಿದ 7 ಅರ್ಚಕರ ಕುಟುಂಬಕ್ಕೆ ಪರಿಹಾರ ನೀಡಿದ್ದೇವೆ. ಮರಣೋತ್ತರ ಪರಿಹಾರವಾಗಿ 14 ಲಕ್ಷ ರೂಪಾಯಿ ನೀಡಲಾಗಿದೆ ಎಂದರು.

ರಾಜ್ಯದಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಯಂತ್ರಣ ಏರುವಂತ ಕ್ರಮ ಕೈಗೊಳ್ಳಲಾಗಿದೆ. ಮುಂದುವರೆದು ರಾಜ್ಯದ ದೇವಾಲಯಗಳಲ್ಲಿ ಆಗಸ್ಟ್.15ರ ಬಳಿಕ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗುತ್ತಿದೆ ಎಂಬುದಾಗಿ ಹೇಳಿದರು.

RELATED ARTICLES
- Advertisment -
Google search engine

Most Popular