Saturday, June 14, 2025
Google search engine

Homeರಾಜ್ಯಸುದ್ದಿಜಾಲಕೋಮುಗಲಭೆ ತಡೆಗೆ ವಿಶೇಷ ಕಾರ್ಯಪಡೆ ಘಟಕಕ್ಕೆ ಗೃಹಸಚಿವ ಡಾ. ಪರಮೇಶ್ವರ್ ಉದ್ಘಾಟನೆ

ಕೋಮುಗಲಭೆ ತಡೆಗೆ ವಿಶೇಷ ಕಾರ್ಯಪಡೆ ಘಟಕಕ್ಕೆ ಗೃಹಸಚಿವ ಡಾ. ಪರಮೇಶ್ವರ್ ಉದ್ಘಾಟನೆ

ಮಂಗಳೂರು (ದಕ್ಷಿಣ ಕನ್ನಡ): ಕೋಮುಗಲಭೆ ಪ್ರಚೋದಿಸುವ ಸರಣಿ ಹತ್ಯೆಗಳ ತಡೆಗೆ ರಾಜ್ಯ ಸರಕಾರ ರಚಿಸಿರುವ ವಿಶೇಷ ಕಾರ್ಯಪಡೆ ಘಟಕವನ್ನು ಗೃಹಸಚಿವ ಡಾ.ಜಿ.ಪರಮೇಶ್ವರ್ ಇಂದು ಬೆಳಗ್ಗೆ ಉದ್ಘಾಟಿಸಿದರು.

ಮಂಗಳೂರಲ್ಲಿರೋ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಜುನಾಥ್ ಭಂಡಾರಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಮತ್ತು ಪೊಲೀಸ್ ಮಹಾ ನಿರೀಕ್ಷಕ ಡಾ.ಎಂ.ಎ.ಸಲೀಂ, ಅಪರ ಪೊಲೀಸ್ ಮಹಾ ನಿರ್ದೇಶಕ ಎಸ್.ಮುರುಗನ್, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ವಿಶೇಷ ಕಾರ್ಯಪಡೆ ಘಟಕದ ಡಿಐಜಿಪಿ (ಪ್ರಭಾರ) ಆಗಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸಿ.ಎಚ್. ಮತ್ತಿತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular