Wednesday, June 18, 2025
Google search engine

Homeಅಪರಾಧಮಂಗಳೂರು: ಕಾರು ತಡೆಗೋಡೆಗೆ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಮಂಗಳೂರು: ಕಾರು ತಡೆಗೋಡೆಗೆ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಮಂಗಳೂರು: ಮಂಗಳೂರಿನ ರಾಷ್ಟ್ರೀಯ ಹೆದ್ದಾರಿ ಜಪ್ಪಿನಮೊಗರು ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ಆಘಾತ ಮೂಡಿಸಿದೆ. ತಲಪಾಡಿಯಿಂದ ಮಂಗಳೂರಿಗೆ ಬರುತ್ತಿದ್ದ ಕಾರು ಹೆದ್ದಾರಿ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಎನ್‌ಎಸ್‌ಯುಐ ಮುಖಂಡ ಓಂ ಶ್ರೀ ಹಾಗೂ ಕದ್ರಿ ನಿವಾಸಿ ಅಮನ್ ರಾವ್ ಎಂದು ಗುರುತಿಸಲಾಗಿದೆ. ಇಬ್ಬರೂ ಯುವಕರು ಕಾಂಗ್ರೆಸ್ಸಿನ ಯುವ ಘಟಕದಲ್ಲಿ ಸಕ್ರಿಯರಾಗಿದ್ದರು.

ಮಂಗಳವಾರ ಮಧ್ಯರಾತ್ರಿ, ಐವರು ಯುವಕರು ಪ್ರಯಾಣಿಸುತ್ತಿದ್ದ ಕಾರು ತಲಪಾಡಿಯಿಂದ ಮಂಗಳೂರಿಗೆ ತೆರಳುತ್ತಿತ್ತು. ಜಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿ ಸೆಕ್ಷನ್‌ನಲ್ಲಿ ಅತಿವೇಗದಿಂದ ಕಾರು ಚಲಾಯಿಸುತ್ತಿದ್ದಾಗ, ನಿಯಂತ್ರಣ ತಪ್ಪಿ ತಡೆಗೋಡೆಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಪಘಾತದಲ್ಲಿ ವಂಶಿ ಮತ್ತು ಆಶಿಕ್ ಎಂಬ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಿಬ್ಬರಿಗೂ ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಸದ್ಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೊಬ್ಬ ಸ್ನೇಹಿತ ಜೆರ್ರಿ, ಇಟಲಿ ಮೂಲದವನಾಗಿದ್ದು, ಅಪಘಾತದ ಹೊತ್ತಿನಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಪೊಲೀಸರ ಪ್ರಕಾರ ಅತಿವೇಗ ಮತ್ತು ಅನುಚಿತ ಚಾಲನೆಯೇ ಈ ಅಪಘಾತಕ್ಕೆ ಪ್ರಮುಖ ಕಾರಣವಾಗಿದೆ. ಚಾಲಕನಿಗೆ ನಿಯಂತ್ರಣ ತಪ್ಪಿದ ಕ್ಷಣದಲ್ಲಿ ಕಾರು ನೇರವಾಗಿ ಹೆದ್ದಾರಿ ತಡೆಗೋಡೆಗೆ ಡಿಕ್ಕಿಯಾಗಿ ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಕಾರು ಸಂಪೂರ್ಣ ಜಖಂಗೊಂಡಿದದೆ.

ಘಟನೆಯ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

RELATED ARTICLES
- Advertisment -
Google search engine

Most Popular