ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಆರ್‌ಸಿಬಿ ಐಪಿಎಲ್ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ ಮುಖಭಂಗವಾಗಿದೆ. ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT) ರದ್ದುಪಡಿಸಿದೆ.
ನ್ಯಾಯಮೂರ್ತಿ ಬಿಕೆ ಶ್ರೀವಾತ್ಸವ ಮತ್ತು ಸಂತೋಷ್ ಮೆಹ್ರಾ ಅವರ ಪೀಠ ಈ ಆದೇಶ ನೀಡಿದ್ದು, ಹಿಂದಿನ ಭತ್ಯೆ ಹಾಗೂ ಸೌಲಭ್ಯಗಳನ್ನು ಒದಗಿಸುವಂತೆ ಸೂಚನೆ ನೀಡಿದೆ. ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ವಿಕಾಸ್ ಕುಮಾರ್ ಪರ ವಾದ ನಡೆಸಿದರು. ಈ ಪ್ರಕರಣಕ್ಕೆ ಸಂಬಂಧಿಸಿ ಹಲವು ಅಧಿಕಾರಿಗಳನ್ನು ಸರ್ಕಾರ ಅಮಾನತು ಮಾಡಿತ್ತು.