ಚಿಕ್ಕಬಳ್ಳಾಪುರ: ಈ ವರ್ಷಾಂತ್ಯದಲ್ಲಿ ರಾಜ್ಯ ಸರ್ಕಾರ ಪತನವಾಗುತ್ತಿದೆ ಎಂದು ಬಿಜೆಪಿ ಭವಿಷ್ಯ ನುಡಿಯುತ್ತಿದ್ದರೇ ಇತ್ತ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಡಿಸಿಎಂ ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಹೇಳಿಕೆ ನೀಡಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ 5 ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಎಂದು ಸ್ಪಷ್ಟಪಡಿಸಿದ್ದಾರೆ.
ಚಿಕ್ಕಬಳ್ಳಾಪುರದ ಭೋಗ ನಂದೀಶ್ವರ ದೇಗುಲಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬಿಜೆಪಿಯವರು ಹಗಲು ಗನಸು ಕಾಣುತ್ತಿದ್ದಾರೆ. ಬಿಜೆಪಿ ಬರೀ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ಬಿಜೆಪಿಯವರು ಯಾವುದೇ ಅಭಿವೃದ್ದಿ ಕೆಲಸಗಳನ್ನ ಮಾಡಿಲ್ಲ ಜನರನ್ನ ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದು ಗುಡುಗಿದರು.
5 ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ. ನಮ್ಮ ಸರ್ಕಾರ ಬಂಡೆಯ ರೀತಿ 5 ವರ್ಷ ಇರಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.