Thursday, July 3, 2025
Google search engine

Homeರಾಜ್ಯನಂದಿಬೆಟ್ಟದಲ್ಲಿ ವಿಶೇಷ ಸಂಪುಟ ಸಭೆ: ಬೆಂಗಳೂರು ಗ್ರಾಮಾಂತರಕ್ಕೆ ‘ಬೆಂಗಳೂರು ಉತ್ತರ’ ನಾಮಕರಣಕ್ಕೆ ಒಪ್ಪಿಗೆ

ನಂದಿಬೆಟ್ಟದಲ್ಲಿ ವಿಶೇಷ ಸಂಪುಟ ಸಭೆ: ಬೆಂಗಳೂರು ಗ್ರಾಮಾಂತರಕ್ಕೆ ‘ಬೆಂಗಳೂರು ಉತ್ತರ’ ನಾಮಕರಣಕ್ಕೆ ಒಪ್ಪಿಗೆ

ಚಿಕ್ಕಬಳ್ಳಾಪುರ: ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಬೆಟ್ಟದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಂದಿಗಿರಿಧಾಮದ ಮಯೂರ ಸಭಾಂಗಣದಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ‘ಬೆಂಗಳೂರು ಉತ್ತರ’ ಎಂಬ ಹೊಸ ಹೆಸರನ್ನು ಇಡಲು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಹೆಸರನ್ನು ‘ಭಾಗ್ಯನಗರ’ ಎಂದು ಮರುನಾಮಕರಣ ಮಾಡಲು ಒಪ್ಪಿಗೆ ನೀಡಲಾಗಿದೆ.

ಇದೇ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ಶಿವಮೊಗ್ಗ, ವಿಜಯನಗರ, ಕೊಪ್ಪಳ ಮತ್ತು ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳ ಅಭಿವೃದ್ಧಿ ಕಾರ್ಯಗಳ ಕುರಿತು ಸಮಾಲೋಚನೆ ನಡೆಸಲಾಗಿದೆ.

ಈ ಹಿಂದೆ ರಾಮನಗರ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ’ ಎಂದು ಮರುನಾಮಕರಣ ಮಾಡಿರುವ ಹಿನ್ನೆಲೆಯಲ್ಲಿ, ಈಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ ಹಾಗೂ ಹೊಸಕೋಟೆ ತಾಲ್ಲೂಕುಗಳನ್ನು ‘ಬೆಂಗಳೂರು ಉತ್ತರ’ ಜಿಲ್ಲೆ ಎಂದು ಮರುನಾಮಕರಣ ಮಾಡಲು ಸಮ್ಮತಿಸಲಾಗಿದೆ.

RELATED ARTICLES
- Advertisment -
Google search engine

Most Popular