Friday, July 4, 2025
Google search engine

Homeರಾಜ್ಯಜಾತಿ ಸಮೀಕ್ಷೆ ಬಗ್ಗೆ ಸಿಎಂ ಸ್ಪಷ್ಟನೆ: ತೊಂದರೆ ಇದ್ದರೆ ಆನ್‌ಲೈನ್ ಮೂಲಕ ಮಾಹಿತಿ ನೀಡಿ: ಸಿಎಂ...

ಜಾತಿ ಸಮೀಕ್ಷೆ ಬಗ್ಗೆ ಸಿಎಂ ಸ್ಪಷ್ಟನೆ: ತೊಂದರೆ ಇದ್ದರೆ ಆನ್‌ಲೈನ್ ಮೂಲಕ ಮಾಹಿತಿ ನೀಡಿ: ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ: ಜಾತಿ ಸಮೀಕ್ಷೆಯಲ್ಲಿ ತೊಂದರೆಗಳಾಗಿದ್ದರೆ ಆನ್ ಲೈನ್ ಮೂಲಕ ದಾಖಲು ಮಾಡಲು ತೊಂದರೆಯಿಲ್ಲ. ಯಾವುದಾದರೂ ಒಂದು ದಾರಿಯಲ್ಲಿ ಜಾತಿ ಹೇಳಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನೆ ಮನೆ ಜಾತಿ ಸಮೀಕ್ಷೆಯಲ್ಲಿ ತೊಂದರೆಗಳಾಗಿದ್ದರೆ ಆನ್ ಲೈನ್ ನಲ್ಲಿ ದಾಖಲು ಮಾಡಲು ತೊಂದರೆಯಿಲ್ಲ. ಯಾವುದಾದರೂ ಒಂದು ದಾರಿಯಲ್ಲಿ ಜಾತಿ ಹೇಳಿಕೊಳ್ಳಬೇಕು. ಸಮೀಕ್ಷೆ ಮಾಡುವವರು ಮನೆಗೆ ಬಂದಾಗ ಅಥವಾ ಶಿಬಿರದಲ್ಲಿ ಅಥವಾ ಆನ್ಲೈನ್ ಹೀಗೆ ಯಾವುದಾದರೂ ಒಂದು ವಿಧಾನದಲ್ಲಿ ಪರಿಶಿಷ್ಟ ಜಾತಿಯವರು ತಮ್ಮ ಜಾತಿಯ ಬಗ್ಗೆ ಮಾಹಿತಿ ನೀಡಬೇಕು. ಸಮೀಕ್ಷೆ ಮಾಡುವವರು ಮನೆ ಮನೆಗೆ ತೆರಳುತ್ತಿದ್ದಾರೆ. ಬೆಂಗಳೂರು ನಗರದಲ್ಲಿ ಕೆಲವರು ಜಾತಿ ಬಗ್ಗೆ ಬಹಿರಂಗವಾಗಿ ಹೇಳಿಕೊಳ್ಳಲು ಕೀಳರಿಮೆ ಇದ್ದರೆ ಅಂಥವರು ಆನ್ ಲೈನ್ ನಲ್ಲಿ ಜಾತಿಯ ಹೆಸರನ್ನು ದಾಖಲಿಸಬಹುದು ಎಂದು ತಿಳಿಸಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸಚಿವರಾಗುವ ಅಧಿಕಾರವಿದೆ. ಸಚಿವ ಸ್ಥಾನದ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. 142 ಜನ ನಮ್ಮ ಪಕ್ಷದವರಿದ್ದಾರೆ. 34 ಜನರನ್ನು ಮಾತ್ರ ಸಚಿವರನ್ನಾಗಿಸಬಹುದು. ಎಲ್ಲರನ್ನು ಮಾಡಲಾಗುವುದಿಲ್ಲ. ಶೇ.15% ಜನರನ್ನು ಮಾತ್ರ ಮಾಡಬಹುದು ಎಂದು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular