ಬೆಂಗಳೂರು : ರಾಜ್ಯ ಚುನಾವಣಾ ಆಯೋಗ 5 ಪಟ್ಟಣ ಪಂಚಾಯಿತಿ ಹಾಗೂ 3 ವಾರ್ಡುಗಳ ಉಪ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದು, ಜುಲೈ 29 ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಆಗಸ್ಟ್ 5 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ರಾಜ್ಯ ಚುನಾವಣಾ ಆಯೋಗವು ಸಂವಿಧಾನದ ಪರಿಚ್ಛೇದ 243-ಜೆಡ್ಎ ರಲ್ಲಿ ಪ್ರದತ್ತವಾದ ಅಧಿಕಾರದ ಮೇರೆಗೆ ಕರ್ನಾಟಕ ಪೌರಸಭೆಗಳ ಅಧಿನಿಯಮ, 1964 ರ ಪ್ರಕರಣ 17 ಮತ್ತು 19 ರನ್ವಯ ಹಾಗೂ ಕರ್ನಾಟಕ ಪೌರಸಭೆಗಳ (ಕೌನ್ಸಿಲರುಗಳ ಚುನಾವಣೆ) ನಿಯಮಗಳು, 1977ರ ನಿಯಮ 3(1) ರನ್ವಯ ಅನುಬಂಧ-01 ರಲ್ಲಿ ಹೆಸರಿಸಲಾದ ಹೊಸದಾಗಿ ರಚನೆಯಾಗಿರುವ 05 ಪಟ್ಟಣ ಪಂಚಾಯತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಅನುಬಂಧ – 02 ರಲ್ಲಿ ಹೆಸರಿಸಲಾದ ವಾರ್ಡುಗಳಿಗೆ ಉಪ ಚುನಾವಣೆಯನ್ನು ಈ ಕೆಳಕಂಡ ಚುನಾವಣಾ ವೇಳಾಪಟ್ಟಿಯನುಸಾರ ನಡೆಸಲು ಆದೇಶಿಸಲಾಗಿದೆ.
1) ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನಾಂಕ ಮತ್ತು ದಿನ : 29/07/2025 ಮಂಗಳವಾರ
2 ) ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮತ್ತು ದಿನ : 05/08/2025 ಮಂಗಳವಾರ
3) ನಾಮಪತ್ರಗಳನ್ನು ಪರಿಶೀಲಿಸುವ ದಿನಾಂಕ ಮತ್ತು ದಿನ 06/08/2025 ಬುಧವಾರ
4) ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ ಮತ್ತು ದಿನ 08/08/2025 ಶುಕ್ರವಾರ
ಸದಾಚಾರ ಸಂಹಿತೆಯು ದಿನಾಂಕ: 29/07/2025 ರಿಂದ ದಿನಾಂಕ: 20/08/2025 ರವರೆಗೆ ಸಾರ್ವತ್ರಿಕ ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಾಗೂ ಉಪ ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವಾರ್ಡುಗಳ ವ್ಯಾಪ್ತಿಯಲ್ಲಿ ಮಾತ್ರ ಜಾರಿಯಲ್ಲಿರುತ್ತದೆ.
ಜಿಲ್ಲಾಧಿಕಾರಿಗಳು, ಅಯೋಗವು ಆದೇಶಿಸಿದ ಚುನಾವಣಾ ವೇಳಾಪಟ್ಟಿಯನ್ನು ಅನುಸರಿಸಿ ಕರ್ನಾಟಕ ಪೌರಸಭೆಗಳ (ಕೌನ್ಸಿಲರುಗಳ ಚುನಾವಣೆ) ನಿಯಮಗಳು, 1977ರ ನಿಯಮ 8ರ ಪ್ರಕಾರ ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಚುನಾವಣಾ ಅಧಿಸೂಚನೆಯನ್ನು ಪ್ರಪತ್ರ-1 ರಲ್ಲಿ ಹೊರಡಿಸತಕ್ಕದ್ದು. ಚುನಾವಣಾ ಅಧಿಸೂಚನೆಯ ಅನುಬಂಧದಲ್ಲಿ ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಯ ಹೆಸರು. ವಾರ್ಡ್ ಸಂಖ್ಯೆ, ಮೀಸಲಾತಿ ವಿವರಗಳನ್ನು ಸ್ಪಷ್ಟವಾಗಿ ನಮೂದಿಸತಕ್ಕದ್ದು ಹೊರಡಿಸಲಾದ ಅಧಿಸೂಚನೆಯನ್ನು ಅದೇ ದಿನದಂದು ವಿಶೇಷ ರಾಜ್ಯ ಪತ್ರದಲ್ಲಿ ಪ್ರಕಟಿಸತಕ್ಕದ್ದು ಅಧಿಸೂಚನೆಯ ಪ್ರತಿಗಳನ್ನು ಜಿಲ್ಲಾಧಿಕಾರಿಗಳ ಕಚೇರಿ, ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಯ ಕಚೇರಿ ಮತ್ತು ಇನ್ನಿತರ ಮುಖ್ಯ ಸ್ಥಳಗಳಲ್ಲಿಯೂ ಸಹಾ ಪ್ರದರ್ಶಿಸತಕ್ಕದ್ದು ಹಾಗೂ ಅಂದೇ ಇ-ಮೇಲ್ ಮುಖಾಂತರ ರಾಜ್ಯ ಚುನಾವಣಾ ಆಯೋಗಕ್ಕೂ ಕಳುಹಿಸುವುದು.
ಅಧಿಸೂಚನೆಯ ಪ್ರತಿಯನ್ನು ಸಂಬಂಧಿಸಿದ ಚುನಾವಣಾಧಿಕಾರಿಗಳಿಗೆ ಕಳುಹಿಸಿಕೊಟ್ಟು. ಅದೇ ದಿನದಂದು ಪ್ರಪತ್ರ-1ಎ ರಲ್ಲಿ ಚುನಾವಣಾ ನೋಟೀಸನ್ನು ಪ್ರಕಟಿಸುವಂತೆ ಮತ್ತು ಚುನಾವಣಾ ಪ್ರಕ್ರಿಯೆಯನ್ನು ಪ್ರಾರಂಭಿಸುವಂತೆ ಸೂಚಿಸುವುದು. ಚುನಾವಣಾ ವೇಳಾಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ದಿನಪತ್ರಿಕೆಗಳಲ್ಲಿ ಮತ್ತು ಸ್ಥಳೀಯ ಪತ್ರಿಕೆಗಳಲ್ಲಿ (ವೆಚ್ಚ ಬಾರದಂತೆ) ಪ್ರಕಟಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವುದು ಎಂದು ತಿಳಿಸಿದೆ.