Sunday, July 13, 2025
Google search engine

HomeUncategorizedಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ: ಪ್ರಿಯಾಂಕ್ ಖರ್ಗೆ

ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ: ಪ್ರಿಯಾಂಕ್ ಖರ್ಗೆ

ಹುಬ್ಬಳ್ಳಿ; ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‌ ಗೆ ಬಿಟ್ಟ ನಿರ್ಧಾರ. ಆ ಬಗ್ಗೆ ಅವರೇ ಮಾತನಾಡುತ್ತಿಲ್ಲ ಎಂದಾಗ ನಾವು ನೀವು ಚರ್ಚೆ ನಡೆಸುವುದರಲ್ಲಿ ಅರ್ಥವಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.

ಇಂದು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಕುರಿತು ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಣ್‌ ದೀಪ್‌  ಸುರ್ಜೇವಾಲಾ ಅವರು ಯಾರ ಜತೆಯೂ ಮಾತುಕತೆ ನಡೆಸಿಲ್ಲ. ಮುಖ್ಯಮಂತ್ರಿಯನ್ನು ಬದಲಾಯಿಸುವ ಅಧಿಕಾರ ಇರುವ ಪಕ್ಷದ ನಾಯಕರೇ ಮೌನವಾಗಿದ್ದಾರೆ. ಆದ್ದರಿಂದ ಆ ವಿಷಯ ಕುರಿತು ಚರ್ಚಿಸುವುದು ಅಪ್ರಸ್ತುತ ಎಂದರು.

ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಶಾಸಕರೊಂದಿಗೆ ಸಭೆ ನಡೆಸಿ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ‌ ಕಾರ್ಯೋನ್ಮುಖರಾಗಬೇಕು ಎಂದು ಸಲಹೆ ನೀಡಿದ್ದಾರೆ. ಅವರು ನಡೆಸಿದ ಸಭೆಯಲ್ಲಿ ಸಿಎಂ ಬದಲಾವಣೆ ಅಥವಾ ಕೆಪಿಸಿಸಿ ಅಧ್ಯಕರ ಬದಲಾವಣೆ ಕುರಿತು ಯಾವ ಚರ್ಚೆಯೂ ನಡೆದಿಲ್ಲ. ಎಲ್ಲವನ್ನೂ ಹೈಕಮಾಂಡ್ ನೋಡಿಕೊಳ್ಳುತ್ತಿದೆ ಎಂದು ಹೇಳಿದರು.

ಪಕ್ಷದ ವರಿಷ್ಠ ನಾಯಕ ರಾಹುಲ್ ಗಾಂಧಿ ಅವರು ಬಿಹಾರ ಪ್ರವಾಸದಲ್ಲಿ ಇದ್ದ ಕಾರಣ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯನ್ನು ದೆಹಲಿಯಲ್ಲಿ ಭೇಟಿಯಾಗಲು ಸಾಧ್ಯವಾಗಿಲ್ಲ. ಈ ಕಾರಣದಿಂದ ರಾಜ್ಯ ನಾಯಕರು ದುರ್ಬಲ ಎಂದು ಹೇಳುವುದರಲ್ಲಿ ಅರ್ಥವಿಲ್ಲ ಎಂದೂ ಪ್ರಿಯಾಂಕ್ ಖರ್ಗೆ ತಿಳಿಸಿದರು.

RELATED ARTICLES
- Advertisment -
Google search engine

Most Popular