Monday, July 14, 2025
Google search engine

Homeಅಪರಾಧಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಭೀಕರ ಅಪಘಾತ: ನಾಲ್ವರು ದಾರುಣ ಸಾವು

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಭೀಕರ ಅಪಘಾತ: ನಾಲ್ವರು ದಾರುಣ ಸಾವು

ರಾಮನಗರ: ರಾಮನಗರ ತಾಲೂಕಿನ ಜಯಪುರ ಗೇಟ್ ಸಮೀಪ ಬೆಂಗಳೂರು–ಮೈಸೂರು ದಶಪಥ ಹೆದ್ದಾರಿಯಲ್ಲಿ ಕಾರು ತಡೆಗೋಡೆಗೆ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿದ್ದಾರೆ.

ಮೃತರು ಕೆಆರ್ ಪೇಟೆಯ ಮುತ್ತುರಾಜು (55), ತಮ್ಮನಗೌಡ (27), ಸಂಜು (28) ಹಾಗೂ ಚಾಲಕ ಸಚಿನ್ (27). ಮೈಸೂರಿನಿಂದ ಬೆಂಗಳೂರು ಕಡೆಗೆ ಬರುತ್ತಿದ್ದಾಗ ಚಾಲಕನ ನಿದ್ರೆ ಮಂಪರಿನಿಂದ ಕಾರು ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿಯಾಗಿದೆ. ಮೂವರು ಸ್ಥಳದಲ್ಲೇ ಮೃತಪಟ್ಟರೆ, ಓರ್ವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ರಾಮನಗರ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

RELATED ARTICLES
- Advertisment -
Google search engine

Most Popular