ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರಲ್ಲಿ ವಿಧಾನ ಪರಿಷತ್ ಸದಸ್ಯರೊಬ್ಬರು ಸರ್ಕಾರಿ ಬಸ್ ಕಂಡಕ್ಟರ್ ಆಗಿ ಕಾಣಿಸಿಕೊಂಡಿದ್ದಾರೆ. ಹೌದು. ಕೆಎಸ್ಸಾರ್ಟಿಸಿ ಬಸ್‍ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವ ‘ಶಕ್ತಿ ಯೋಜನೆ’ಯಡಿ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ 500 ಕೋಟಿ ತಲುಪಿದ ಪ್ರಯುಕ್ತ ಮಂಗಳೂರಿನ ಬಿಜೈ ನಲ್ಲಿರುವ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಜಿಲ್ಲಾ ಬಸ್ ಗಳಿಗೆ ಪೂಜಾ ಕಾರ್ಯಕ್ರಮ ಇಂದು ನಡೆಯಿತು.

ಇದೇ ವೇಳೆ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರು ಬಸ್ ಕಂಡಕ್ಟರ್ ಆಗಿ ಟಿಕೆಟ್ ನೀಡಿ ಗಮನ ಸೆಳೆದ್ರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಜೆ ಆರ್ ಲೋಬೊ ಮತ್ತಿತರರು ಇದ್ದರು.