Friday, July 18, 2025
Google search engine

Homeರಾಜ್ಯಸುದ್ದಿಜಾಲಮಂಗಳೂರು: ಕೌಟುಂಬಿಕ ಕಲಹ; ಕೋಪದ ಭರದಲ್ಲಿ ಪತಿಯಿಂದ ಪತ್ನಿ ಕೊಲೆ

ಮಂಗಳೂರು: ಕೌಟುಂಬಿಕ ಕಲಹ; ಕೋಪದ ಭರದಲ್ಲಿ ಪತಿಯಿಂದ ಪತ್ನಿ ಕೊಲೆ

ಮಂಗಳೂರು (ದಕ್ಷಿಣ ಕನ್ನಡ): ಪತಿಯೇ ಕೋಪದ ಭರದಲ್ಲಿ ಪತ್ನಿಯನ್ನು ಕೊಂದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತೆಕ್ಕಾರು ಗ್ರಾಮದ ಬಾಜಾರು ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಝೀನತ್ (40) ಎಂದು ಗುರುತಿಸಲಾಗಿದೆ.

ರಫೀಕ್, ಕೊಲೆ ಮಾಡಿದ ಆರೋಪಿ ಪತಿ. ಇವ್ರಿಬ್ಬರ ಮದುವೆ 18 ವರ್ಷದ ಹಿಂದೆ ಆಗಿತ್ತು. ಇಬ್ಬರು ಮಕ್ಕಳಿದ್ದಾರೆ. ಈ ದಂಪತಿ ಮಧ್ಯೆ ಕಳೆದ ಕೆಲವು ತಿಂಗಳುಗಳಿಂದ ವೈಮನಸ್ಸು ಉಂಟಾಗಿ ಕೌಟುಂಬಿಕ ಕಲಹ ನಡೆಯುತ್ತಿತ್ತು. ಇಂದು ಬೆಳಿಗ್ಗೆ ಕೌಟುಂಬಿಕ ಕಲಹ ನಡೆದಾಗ ಆರೋಪಿ ರಫೀಕ್ ನು ತನ್ನ ಪತ್ನಿ ಝೀನತ್ ಗೆ ಚಾಕುವಿನಿಂದ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಗಾಯಗೊಂಡಿದ್ದ ಝೀನತ್ ರನ್ನು ಸ್ಥಳೀಯರು ಹಾಗೂ ಸಂಬಂಧಿಕರು ಚಿಕಿತ್ಸೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಅ.ಕ್ರ: ಅ.ಕ್ರ 64/2025 ಕಲಂ: 103(1) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

RELATED ARTICLES
- Advertisment -
Google search engine

Most Popular