ವರದಿ: ಎಡತೊರೆ ಮಹೇಶ್
ಎಚ್.ಡಿ. ಕೋಟೆ : ಇದೇ ತಿಂಗಳು 21 ರಂದು ಮಲ್ಲಿಕಾರ್ಜುನ ಖರ್ಗೆಯವರ 84 ನೇ ಹುಟ್ಟುಹಬ್ಬವನ್ನು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸುತ್ತಿದ್ದೇವೆ ಎಂದು ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಜಿಯಾರ ಸುರೇಶ್ ತಿಳಿಸಿದರು.
ಪಟ್ಟಣದ ಪತ್ರಕರ್ತರ ಸಂಘದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಮೈಸೂರಿನ ನಾರಾಯಣ ಹೃದಯಾಲಯ, ಆರ್ಯ ಆಸ್ಪತ್ರೆಯ ವತಿಯಿಂದ ಆರೋಗ್ಯ ತಪಾಸಣೆಯನ್ನು ಏರ್ಪಡಿಸಲಾಗಿದೆ. ಬಡ 10 ಕುಟುಂಬಗಳಿಗೆ ಆಹಾರ ಕಿಟ್ ವಿತರಣೆಯನ್ನು ಮಾಡುತ್ತಿದ್ದೇವೆ. ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಳ್ಳೂರು ನಾಗೇಂದ್ರರವರು ವಿವಿಧ ದೇಶಗಳಲ್ಲಿ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿ ಅನೇಕ ಪದಕಗಳನ್ನು ದೇಶಕ್ಕೆ ಗಳಿಸಿದ್ದು ಅವರಿಗೆ ಸನ್ಮಾನವನ್ನು ನಡೆಸಿಕೊಡಲಾಗುವುದು ಎಂದರು.
ಅಲ್ಲದೇ ವಿವಿಧ ಸಮಾಜ ಸೇವೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಹೈರಿಗೆ ಮಲ್ಲೇಶ್, ವನಸಿರಿ ಶಂಕರ್ ಇದ್ದರು.