Tuesday, July 22, 2025
Google search engine

Homeರಾಜ್ಯಸುದ್ದಿಜಾಲಶಿಕ್ಷಣವೇ ಬದುಕಿನ ಬದಲಾವಣೆಗೆ ಮಾರ್ಗ : ಶಾಸಕ ಡಿ. ರವಿಶಂಕರ್

ಶಿಕ್ಷಣವೇ ಬದುಕಿನ ಬದಲಾವಣೆಗೆ ಮಾರ್ಗ : ಶಾಸಕ ಡಿ. ರವಿಶಂಕರ್

ಕೆ.ಆರ್.ನಗರ: ಬದುಕಿನ ಬದಲಾವಣೆಗೆ ಶಿಕ್ಷಣ ಬಹಳ ಪ್ರಮುಖವಾಗಿದ್ದು ಇದನ್ನು ವಿದ್ಯಾರ್ಥಿಗಳು ಅರಿತು ಓದಿನ ಕಡೆಗೆ ಗಮನಹರಿಸಬೇಕು ಎಂದು ಶಾಸಕ ಡಿ.ರವಿಶಂಕರ್ ಹೇಳಿದರು. ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಎಸ್‌ಸಿ ಮತ್ತು ಎಸ್‌ಟಿ ನೌಕರರ ಸಂಘದ ವತಿಯಿಂದ ನಡೆದ ಪ್ರತಿಭಾಪುರಸ್ಕಾರ ಮತ್ತು ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ದೇಶ ಅಭಿವೃದ್ದಿ ಹೊಂದಬೇಕಾದರೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಬೇಕು ಈ ವಿಚಾರವನ್ನು ವಿದ್ಯಾರ್ಥಿಗಳು ಗಂಭೀರವಾಗಿ ಪರಿಗಣಿಸಬೇಕು ಎಂದರು.

ದೇಶದ ಜನತೆಗೆ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ರಚಿಸುವ ಸಂಧರ್ಭದಲ್ಲಿ ಶಿಕ್ಷಣ ಎನ್ನುವ ಆಯುಧ ನೀಡಿದ್ದಾರೆ ಅದನ್ನು ಎಲ್ಲರೂ ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆದು ದೇಶವನ್ನು ಮುನ್ನಡೆಸುವ ಅಧಿಕಾರಿಗಳಾಗಬೇಕು ಎಂದು ಸಲಹೆ ನೀಡಿದರು.

ಪಿಯುಸಿಯ ನಂತರ ಪಡೆಯುವ ಪದವಿಗಳಿಂದ ವಿದ್ಯಾರ್ಥಿಗಳ ಬದುಕು ರೂಪುಗೊಳ್ಳಲಿದ್ದು ಈ ವಿಚಾರದಲ್ಲಿ ಪೋಷಕರು ಮಕ್ಕಳಿಗೆ ಇಂತಹದನ್ನೇ ಓದಬೇಕು ಎಂದು ಒತ್ತಡ ಏರದೆ ಮಕ್ಕಳ ವಿವೇಚನಕ್ಕೆ ಬಿಡಬೇಕು ಆಗ ಮಕ್ಕಳ ಸ್ವತಂತ್ರö್ಯವಾಗಿ ಸಾಧನೆ ಮಾಡಲು ಅನುಕೂಲವಾಗಲಿದೆಂದು ಹೇಳಿದರು.

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ.೮೫% ರಷ್ಟು ಅಂಕಗಳಿಸಿದ ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲೂಕಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಸಂಘದ ಪದಾಧಿಕಾರಿಗಳು ಅಂಬೇಡ್ಕರ್ ಅವರ ಅಭಿಮಾನಿಗಳಾಗುವ ಬದಲು ಅವರ ಅನ್ವಯಿಗಳಾಗಿ ಕೆಲಸ ಮಾಡಬೇಕು ಆಗ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ ಎಂದು ಸಲಹೆ ನೀಡಿದ ಶಾಸಕ ಡಿ.ರವಿಶಂಕರ್ ಸಂಘದ ಭವನ ನಿರ್ಮಾಣಕ್ಕೆ ಸಿಎ ನಿವೇಶನ ಕೊಡಿಸುವುದರ ಜತೆಗೆ ಕಟ್ಟಡ ನಿರ್ಮಾಣಕ್ಕೆ ಅನುದಾನ ಕೊಡಿಸುವುದಾಗಿ ಭರವಸೆ ನೀಡಿದರು.

ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ಬಿಎಸ್‌ಪಿ ಪಕ್ಷದ ಮಾಜಿ ರಾಜ್ಯಾಧ್ಯಕ್ಷ ಗೋಪಾಲ್, ಸಂಘದ ತಾಲೂಕು ಅಧ್ಯಕ್ಷ ರಾಮಕೃಷ್ಣ, ಗೌರವಾಧ್ಯಕ್ಷ ಜಿ.ಕೆ.ಸಿದ್ದೇಶ್ವರಪ್ರಸಾದ್, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಪುರಸಭೆ ಅಧ್ಯಕ್ಷ ಶಿವುನಾಯಕ್, ಸಾಹಿತಿ ಮಾಲ್ಕುಂಡಿಮಹದೇವಸ್ವಾಮಿ, ಸರ್ಕಾರಿ ನೌಕರರ ಸಂಘದ ನಿರ್ದೇಶಕ ಬಿ.ಎಲ್.ಮಹದೇವ್ ಮಾತನಾಡಿದರು.

ಸಂಘದ ಜಿಲ್ಲಾಧ್ಯಕ್ಷ ಶಿವರಾಮಕೃಷ್ಣ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಡಾ.ಡಿ.ನಟರಾಜು, ಉಪನ್ಯಾಸಕ ಎನ್.ಆರ್.ಶಿವರಾಮು, ಪುರಸಭೆ ಮಾಜಿ ಅಧ್ಯಕ್ಷೆ ಗೀತಾಮಹೇಶ್, ಮುಖಂಡರಾದ ಹನಸೋಗೆನಾಗರಾಜು, ನಂಜಯ್ಯ, ಚೆಲುವರಾಜು, ರಾಜೇಶ್, ಹೆಚ್.ಪಿ.ಸಂಪತ್, ಕೃಷ್ಣ, ಪುಟ್ಟಸ್ವಾಮಿ, ಸಿ.ಅರ್.ಪಿ.ವಸಂತ್ ಮತ್ತಿತರರು ಹಾಜರಿದ್ದರು.

ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ ಸಮುದಾಯ ಭವನದ ಕಾಮಗಾರಿ ಪೂರ್ಣಗೊಳ್ಳಲು ಅಗತ್ಯವಿರುವ ಅನುದಾನವನ್ನು ಸರ್ಕಾರದಿಂದ ಮಂಜೂರು ಮಾಡಿಸಿ ಮುಂದಿನ ಒಂದು ವರ್ಷದೊಳಗೆ ಭವನ ಉದ್ಘಾಟನೆ ಮಾಡಲಾಗುತ್ತದೆ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಎಸ್‌ಸಿ ಮತ್ತು ಎಸ್‌ಟಿ ನೌಕರರ ಸಂಘದ ವತಿಯಿಂದ ನಡೆದ ಪ್ರತಿಭಾಪುರಸ್ಕಾರ ಮತ್ತು ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ಭವನದ ಕಾಮಗಾರಿ ಪೂರ್ಣಗೊಳ್ಳಿಸುವ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಗಂಭೀರವಾಗಿ ಚರ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಯನ್ನು ಬದಲಾವಣೆ ಮಾಡಲು ನಿರ್ಧರಿಸಲಾಗಿದ್ದು ಕಂಚಿನ ಪುತ್ಥಳಿ ನಿರ್ಮಾಣಕ್ಕೆ ಈಗಾಗಲೇ ಕ್ರಮ ವಹಿಸಲಾಗಿದ್ದು ಪುತ್ಥಳಿ ಅನಾವರಣ ಮತ್ತು ಸಮುದಾಯ ಭವನ ಉದ್ಘಾಟನಾ ಸಮಾರಂಭವನ್ನು ಅದ್ದೂರಿಯಾಗಿ ನೆರವೇರಿಸಲು ತೀರ್ಮಾನಿಸಲಾಗಿದ್ದು ಸಮಾರಂಭಕ್ಕೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನಖರ್ಗೆ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಹಲವು ಸಚಿವರುಗಳನ್ನು ಸಮಾರಂಭಕ್ಕೆ ಕರೆ ತರಲಾಗುತ್ತದೆ ಎಂದು ಹೇಳಿದರು.

ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲೂಕುಗಳಲ್ಲಿ ನಿರ್ಮಾಣ ಹಂತದಲ್ಲಿರುವ ವಾಲ್ಮೀಕಿ ಸಮುದಾಯ ಭವನ ಹಾಗೂ ಅಂಬೇಡ್ಕರ್ ಸಮುದಾಯ ಭವನಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಅನುದಾನ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದ ಶಾಸಕರು ಕೆ.ಆರ್.ನಗರ ಪಟ್ಟಣದಲ್ಲಿ ಡಿಜಿಟಲ್ ಗ್ರಂಥಾಲಯ ನಿರ್ಮಾಣ ಮಾಡಲು ಸಮಾಜ ಕಲ್ಯಾಣ ಇಲಾಖೆಗೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular