Tuesday, July 22, 2025
Google search engine

Homeಅಪರಾಧ20 ಸಾವಿರ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

20 ಸಾವಿರ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

ತುಮಕೂರು : ತುಮಕೂರಲ್ಲಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ನಡೆದಿದೆ.

ಮಧುಗಿರಿ ತಾಲೂಕಿನ ಉಪನಿಬಂಧಕ ಅಧಿಕಾರಿ ಸಣ್ಣಪ್ಪಯ್ಯ ಮತ್ತು ಪ್ರಥಮ ದರ್ಜೆ ಸಹಾಯಕ ರಾಘವೇಂದ್ರ ಲೋಕಾಯುಕ್ತ ಪೊಲೀಸರು ಬಲೆಗೆ ಬಿದ್ದಿದ್ದಾರೆ. ಸಹಕಾರ ಸಂಘಗಳ ಮಧುಗಿರಿ ಉಪನಿಬಂಧಕ ಕಚೇರಿಯ ಅಧಿಕಾರಿಗಳಾಗಿದ್ದು, ಶಿರಾ ತಾಲೂಕಿನ ಯಲಿಯೂರು ಗ್ರಾಮದ ಮೀನುಗಾರಿಕೆ ಸಹಕಾರ ಸಂಘದ ಖಾತೆ, ಮೀನುಗಾರಿಕೆ ಸಹಕಾರ ಸಂಘದ ಖಾತೆಯನ್ನು ಸ್ಥಗಿತಗೊಳಿಸಲಾಗಿತ್ತು. ಅದನ್ನು ತೆರವುಗೊಳಿಸಲು 20 ಸಾವಿರ ಲಂಚಕ್ಕೆ ಇಬ್ಬರೂ ಅಧಿಕಾರಿಗಳು ಬೇಡಿಕೆ ಇಟ್ಟಿದ್ದರು.

ಈ ಬಗ್ಗೆ ಮೀನುಗಾರಿಕೆ ಸಹಕಾರ ಸಂಘದ ಪದಾಧಿಕಾರಿ ರವೀಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಹಾಗಾಗಿ ನಿನ್ನೆ ಸಂಜೆ ಕಚೇರಿಯಲ್ಲಿ 20,000 ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರೆಡ್ ಹ್ಯಾಂಡ್ ಆಗಿ ಸಣ್ಣಪ್ಪಯ್ಯಾ ಹಾಗೂ ರಾಘವೇಂದ್ರ ಬಲೆಗೆ ಬಿದ್ದಿದ್ದಾರೆ. ಸದ್ಯ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular