Sunday, July 27, 2025
Google search engine

Homeರಾಜ್ಯರಾಜ್ಯಾದ್ಯಂತ ಮುಂದುವರೆದ ಮಳೆ: ರೆಡ್ ಅಲರ್ಟ್ ಘೋಷಣೆ

ರಾಜ್ಯಾದ್ಯಂತ ಮುಂದುವರೆದ ಮಳೆ: ರೆಡ್ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯಾದ್ಯಂತ ಮತ್ತೆ ಮಳೆಯ ಅಬ್ಬರ ಮುಂದುವರೆದಿದ್ದು, ಕರಾವಳಿಯಲ್ಲಿ ಹವಾಮಾನ ಇಲಾಖೆ ಇಂದು ರೆಡ್ ಅಲರ್ಟ್ ಘೋಷಿಸಿದೆ.

ಇಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಹಾಸನ ಜಿಲ್ಲೆ: ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಸಕಲೇಶಪುರ, ಬೇಲೂರು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಇಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ

ಚಿಕ್ಕಮಗಳೂರು ಜಿಲ್ಲೆಯಲ್ಲೂ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ 5 ತಾಲೂಕುಗಳ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ 7 ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾರವಾರ, ಅಂಕೋಲಾ ಕುಮಟಾ, ಹೊನ್ನಾವರ, ಭಟ್ಕಳ, ದಾಂಡೇಲಿ, ಜೋಯಿಡಾ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ರಜೆ ಘೋಷಿಸಿ ಆದೇಶಿಸಿದ್ದಾರೆ.

ಶಿವಮೊಗ್ಗ ಜಿಲ್ಲೆ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ, ತಾಲೂಕುಗಳಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ ರಜೆ ಘೋಷಿಸಿದ್ದು, ಭದ್ರಾವತಿ ಹಾಗೂ ಶಿವಮೊಗ್ಗದಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಕಾಲೇಜಿಗೆ ರಜೆ ಘೋಷಿಸಲಾಗಿದೆ. ಎಲ್ಲಾ ಅಂಗನವಾಡಿ ಕೇಂದ್ರಗಳು. ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ದಿನಾಂಕ 26.7.2025 ರ ಶನಿವಾರದಂದು ರಜೆ ಘೋಷಿಸಿದೆ. ಸದರಿ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನಗಳಲ್ಲಿ ಸರಿ ಹೊಂದಿಸಿಕೊಳ್ಳಲು ಸಂಬಂಧಿತ ಶಾಲಾ ಮುಖ್ಯಸ್ಥರುಗಳಿಗೆ ತಿಳಿಸಿದೆ.

ಕೊಡಗು ಜಿಲ್ಲೆ: ಕೊಡಗು ಜಿಲ್ಲೆಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಜುಲೈ 26 ರಂದು ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ.

RELATED ARTICLES
- Advertisment -
Google search engine

Most Popular