Sunday, July 27, 2025
Google search engine

Homeರಾಜ್ಯಸುದ್ದಿಜಾಲಧರ್ಮಸ್ಥಳ ಸರಣಿ ಕೊಲೆ ಪ್ರಕರಣ: ಎಸ್‌ಐಟಿ ತನಿಖೆ ಎರಡನೇ ದಿನವೂ ಚುರುಕು – ಪ್ರಣಬ್ ಮೊಹಾಂತಿ...

ಧರ್ಮಸ್ಥಳ ಸರಣಿ ಕೊಲೆ ಪ್ರಕರಣ: ಎಸ್‌ಐಟಿ ತನಿಖೆ ಎರಡನೇ ದಿನವೂ ಚುರುಕು – ಪ್ರಣಬ್ ಮೊಹಾಂತಿ ನೇತೃತ್ವದಲ್ಲಿ ದೂರುದಾರ ವಿಚಾರಣೆ

ಮಂಗಳೂರು (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ‌ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಸರಣಿ ಕೊಲೆ, ನೂರಾರು ಮೃತದೇಹಗಳ ಹೂತು ಹಾಕುವಿಕೆ ಪ್ರಕರಣದ ತನಿಖೆಗಾಗಿ ರಾಜ್ಯ ಸರಕಾರ ರಚಿಸಿದ ವಿಶೇಷ ತನಿಖಾ ತಂಡ ಎರಡನೇ ದಿನವೂ ತನಿಖೆ ಚುರುಕುಗೊಳಿಸಿದೆ. ಎಸ್‌ಐಟಿ ತಂಡದ ಮುಖ್ಯಸ್ಥ ಪ್ರಣಬ್ ಮೊಹಾಂತಿ ನೇತೃತ್ವದಲ್ಲಿ ರವಿವಾರ ಎಸ್‌ಐಟಿ ತಂಡವು ದೂರುದಾರನ ವಿಚಾರಣೆ ನಡೆಸುತ್ತಿದೆ.

ರವಿವಾರ ಬೆಳಗ್ಗೆ ದೂರುದಾರ ತನ್ನ ವಕೀಲರೊಂದಿಗೆ ಮಂಗಳೂರಿನ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ ಎನ್ನಲಾಗಿದ್ದು, ಮಧ್ಯಾಹ್ನ ಪ್ರಣಬ್ ಮೊಹಾಂತಿ ಎಸ್.ಐ.ಟಿ ಕಚೇರಿಗೆ ಆಗಮಿಸಿ, ದೂರುದಾರನ ವಿಚಾರಣೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.

ಜುಲೈ 26ರಂದು ದೂರುದಾರನನ್ನು ಪೊಲೀಸ್ ಅಧಿಕಾರಿಗಳಾದ ಅನುಚೇತ್, ಜಿತೇಂದ್ರ ಕುಮಾರ್ ದಯಾಮ ಸಹಿತ ಇತರ ಸಿಬ್ಬಂದಿ ಸತತ 8 ಗಂಟೆಗಳ ಕಾಲ ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಿದ ಬಳಿಕ ಸಂಜೆ ವೇಳೆ ಅವರ ವಕೀಲರ ಜೊತೆ ಕಳುಹಿಸಿ ಕೊಟ್ಟಿದ್ದರು. ರವಿವಾರ ಮತ್ತೆ ದೂರುದಾರನನ್ನು ಎಸ್‌.ಐ.ಟಿ ಕಚೇರಿಗೆ ಕರೆಸಿದ್ದು, ಪ್ರಣಬ್ ಮೊಹಾಂತಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

RELATED ARTICLES
- Advertisment -
Google search engine

Most Popular