ಮಂಡ್ಯ: ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರಿಕರಣ ಪ್ರಕರಣವನ್ನು ಸಿಓಡಿ ತನಿಖೆಗೆ ವಹಿಸಲು ಆಗ್ರಹಿಸಿ ಮಂಡ್ಯದ ಡಿಸಿ ಕಚೇರಿ ಬಳಿ ಇಂದು ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಯಿತು.
ವೈದ್ಯ ವಿದ್ಯಾರ್ಥಿನಿಯ ಖಾಸಗಿ ವಿಡಿಯೋ ಚಿತ್ರಿಕರಣ ಮಾಡಿದ 3 ಜನ ವಿದ್ಯಾರ್ಥಿನಿಯರ ಬಂಧಿಸಿ, ಈ ಪ್ರಕರಣವನ್ನು ಸಿಓಡಿ ತನಿಖೆಗೆ ವಹಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಆರೋಪಿಗಳ ಮೇಲೆ ನಾಟಕದ ಎಫ್ ಐ ಆರ್ ಹಾಕಿದ್ದಾರೆ. ಪ್ರಕರಣವನ್ನು ತಕ್ಷಣವೇ ಸರ್ಕಾರ ಸಿಓಡಿ ತನಿಖೆಗೆ ವಹಿಸಬೇಕು ಕಾಂಗ್ರೆಸ್ ಸರ್ಕಾರ ಕೂಡಲೇ ಹೆಣ್ಣುಮಕ್ಕಳಿಗೆ ರಕ್ಷಣೆ ನೀಡಬೇಕು. ಇಲ್ಲದಿದ್ದರೆ ಉಗ್ರಹೋರಾಟ ಮಾಡುವುದಾಗಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.