ಚಿಕ್ಕಬಳ್ಳಾಪುರ: ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚನೆ ಮಾಡಲಾಗಿದೆ ಎಂದು ಆರೋಪಿಸಿ ಸಂಸದ ಡಾ.ಕೆ.ಸುಧಾಕರ್ ಮತ್ತಿಬ್ಬರ ಹೆಸರು ಬರೆದಿಟ್ಟು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಚಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಜಿಲ್ಲಾ ಪಂಚಾಯಿತಿ ಗುತ್ತಿಗೆ ಚಾಲಕ ಎನ್ ಬಾಬು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬಿಜೆಪಿ ಸಂಸದ ಡಾ. ಕೆ ಸುಧಾಕರ್ ಹಾಗು ಯುವಕರಿಬ್ಬರ ಹೆಸರು ಬರೆದಿಟ್ಟಿದ್ದು ಸರ್ಕಾರಿ ಕೆಲಸ ಕೊಡಿಸೋದಾಗಿ ಹೇಳಿ ಹಣ ಪಡೆದು ವಂಚನೆ ಎಸಗಿರುವ ಆರೋಪ ಕೇಳಿ ಬಂದಿದೆ.
ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ ಅವರ ಬೆಂಬಲಿಗರಾದ, ನಾಗೇಶ್ ಮಂಜುನಾಥ್ ಹೆಸರು ಬರೆದಿಟ್ಟು ಗುತ್ತಿಗೆ ಚಾಲಕ ಎನ್. ಬಾಬು ನೇಣಿಗೆ ಶರಣಾಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.