ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಕಾರು ಚಾಲಕ ಬಾಬು ಆತ್ಮಹತ್ಯೆ ಪ್ರಕರಣ ರಾಜಕೀಯ ತೂಕ ಪಡೆದುಕೊಂಡಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಜಟಾಪಟಿ ಗರಿಷ್ಠ ಮಟ್ಟ ತಲುಪಿದೆ. ಪ್ರತಿ ದಿನ ಹೊಸ ತಿರುವು ಕಾಣುತ್ತಿರುವ ಈ ಪ್ರಕರಣದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮತ್ತು ಸಂಸದ ಡಾ. ಕೆ. ಸುಧಾಕರ್ ಬೆಂಬಲಿಗರ ನಡುವೆ ಫೋಸ್ಟರ್ ವಾರ್ ಕೂಡ ನಡೆದಿತ್ತು.
ಇದೀಗ, ಸುಧಾಕರ್ ಬೆಂಬಲಿಗ ಮುನಿರಾಜು ಎಂಬಾತ, ಜಾತಿ ನಿಂದನೆ ಆರೋಪದಡಿ ಪ್ರದೀಪ್ ಈಶ್ವರ್ ಬೆಂಬಲಿಗರ ವಿರುದ್ಧ ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಈ ಆಧಾರದಲ್ಲಿ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ.
ಇನ್ನೊಂದು ಕಡೆ, ಮೊಹಮ್ಮದ್ ಹಮೀಮ್ ಎಂಬಾತ ನೀಡಿದ ದೂರಿನಲ್ಲಿ ಸುಧಾಕರ್ ಬೆಂಬಲಿಗರ ವಿರುದ್ಧ ಹಲ್ಲೆ ಮತ್ತು ಬೆದರಿಕೆ ಆರೋಪ ಮಾಡಲಾಗಿದೆ. ಇದರಿಂದಾಗಿ ಇಬ್ಬರು ನಾಯಕರ ಬೆಂಬಲಿಗರ ನಡುವೆ ದೂರು–ಪ್ರತಿದೂರು ದಾಖಲಾಗಿದ್ದು, ಪೊಲೀಸ್ ತನಿಖೆ ಮುಂದುವರಿದಿದೆ.