Monday, August 11, 2025
Google search engine

Homeರಾಜಕೀಯಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ

ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ

ಬೆಂಗಳೂರು: ದಿಢೀರ್ ಬೆಳವಣಿಗೆ ಎನ್ನುವಂತೆ ಸಚಿವ ಸ್ಥಾನಕ್ಕೆ ಸಚಿವ ಕೆಎನ್ ರಾಜಣ್ಣ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ. 

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸಚಿವ ಸಂಪುಟದಲ್ಲಿ ಸಹಕಾರ ಸಚಿವರಾಗಿದ್ದಂತ ಕೆ.ಎನ್ ರಾಜಣ್ಣ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಸಚಿವ ಸಂಪುಟದಿಂದ ಹೊರ ನಡೆದಿದ್ದಾರೆ.

ಕೆಲ ಹೊತ್ತಿನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಲಿರುವಂತ ಸಚಿವ ಕೆ.ಎನ್ ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ತಿಳಿದು ಬಂದಿದೆ.

ಅಂದಹಾಗೇ ಕೆ.ಎನ್ ರಾಜಣ್ಣ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ರಾಜೀನಾಮೆ ಸಲ್ಲಿಸುವಂತೆ ಸೂಚಿಸಿತ್ತು ಎನ್ನಲಾಗಿದೆ. ಈ ಹಿನ್ನಲೆಯಲ್ಲೇ ಅವರು ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ.

ಮತಗಳ್ಳತನ ಆರೋಪದ ಕುರಿತಂತೆ ಸಚಿವ ಕೆ.ಎನ್ ರಾಜಣ್ಣ ನೀಡಿದ್ದಂತ ಹೇಳಿಕೆ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಜುಗರವನ್ನು ಉಂಟು ಮಾಡಿತ್ತು. ಹೀಗಾಗಿ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ರಾಜೀನಾಮೆ ನೀಡಲು ಸೂಚಿಸಿದ್ದಾರೆ ಎನ್ನಲಾಗುತ್ತಿದೆ.

RELATED ARTICLES
- Advertisment -
Google search engine

Most Popular