ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕ್ಯಾಂಪಸ್ ನಲ್ಲಿ ಜಾಗತಿಕ ಹುಲಿ ದಿನಾಚರಣೆ-2023 ಅಂಗವಾಗಿ ಶಾಲಾ ಮಕ್ಕಳಿಗೆ ಚಿತ್ರಕಲೆ, ಆಶು ಭಾಷಣ ಹಾಗೂ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು.
ವಿಭಾಗೀಯ ಮಟ್ಟದ ಸ್ಪರ್ಧೆಯಲ್ಲಿ ಗುಂಡ್ರೆ ವಲಯದ ಶ್ರೀ ವಿವೇಕನಂದ ಟ್ರೈಬಲ್ ಸ್ಕೂಲ್‍ನ ಮಕ್ಕಳು ಹಾಗೂ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ವಿವಿಧ ಶಾಲೆಗಳಿಂದ ಸುಮಾರು 150 ರಿಂದ 200 ಮಕ್ಕಳಿಗೆ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಬಂಡೀಪುರ ಯುವ ಮಿತ್ರ ಯೋಜನೆಯಡಿ ಸುಮಾರು 60 ಮಕ್ಕಳಿಗೆ ಚಿತ್ರಕಲಾ, ಆಶು ಭಾಷಣ ಹಾಗೂ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು.
ಕಾರ್ಯಕ್ರಮವು ಬಂಡೀಪುರ ವ್ಯಾಪ್ತಿಯ ಶಾಲಾ ಮಕ್ಕಳಲ್ಲಿ ಅರಣ್ಯ ಮತ್ತು ವನ್ಯಜೀವಿ ಪರಿಸರದ ಕಾಳಜಿ, ಅರಿವು ಹಾಗೂ ಸಂರಕ್ಷಣಾ ಮನೋಭಾವ ಬೆಳೆಸಲು ಸಹಕಾರಿಯಾಗಲಿದೆ. ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಜು.29ರಂದು ನಡೆಯುವ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ಮಾಡಲಾಗುವುದು ಎಂದು ಬಂಂಡೀಪುರ ಹುಲಿ ಯೋಜನೆ ನಿರ್ದೇಶಕ ಪಿ.ರಮೇಶ್ ಕುಮಾರ್ ತಿಳಿಸಿದರು.