Thursday, August 14, 2025
Google search engine

Homeರಾಜ್ಯಪ್ರವಾಸೋದ್ಯಮ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಪ್ರವಾಸೋದ್ಯಮ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ : ಪ್ರವಾಸೋದ್ಯಮ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಯೋಜನೆಯಡಿ ಬೆಂಗಳೂರು ನಗರ ಜಿಲ್ಲೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆತಿಥ್ಯ ಕ್ಷೇತ್ರದ ಐ.ಎಚ್. ಎಂ (Institute of Hotel Management) ಮತ್ತು ಎಫ್.ಸಿ.ಐ (Food Craft Institute) ಸಂಸ್ಥೆಗಳ ಮೂಲಕ ಬೆಂಗಳೂರು ಹಾಗೂ ಮೈಸೂರು ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ತರಬೇತಿ ವಿವರ : ಆಹಾರ ಮತ್ತು ಪಾನೀಯ ಸೇವಾ ಮೇಲ್ವಚಾರಕ ತರಬೇತಿಯು ಮೂರು ತಿಂಗಳ ಮತ್ತು ಒಂದು ತಿಂಗಳ ಕೆಲಸದ ತರಬೇತಿಯಾಗಿರುತ್ತದೆ. ವಿದ್ಯಾರ್ಹತೆ 10ನೇ ತರಗತಿ ಉತ್ತೀರ್ಣರಾಗಿರಬೇಕು ಮತ್ತು ವಯೋಮಿತಿ 20 ರಿಂದ 45 ವರ್ಷದೊಳಗಿರಬೇಕು. ಮಲ್ಟಿ ಕ್ಯುಸಿನ್ ಕುಕ್ ತರಬೇತಿಯು ನಾಲ್ಕು ತಿಂಗಳ ಮತ್ತು ಒಂದು ತಿಂಗಳ ಕೆಲಸದ ತರಬೇತಿಯಾಗಿರುತ್ತದೆ. ವಿದ್ಯಾರ್ಹತೆ 08ನೇ ತರಗತಿ ಉತ್ತೀರ್ಣರಾಗಿರಬೇಕು. ವಯೋಮಿತಿ 20 ರಿಂದ 45 ವರ್ಷದೊಳಗಿರಬೇಕು.

ಫ್ರಂಟ್ ಆಫೀಸ್ ಅಸೋಸಿಯೇಟ್ ತರಬೇತಿಯ ಕಾಲಾವಧಿ ಮೂರು ತಿಂಗಳ ಮತ್ತು ಒಂದು ತಿಂಗಳ ಕೆಲಸದ ತರಬೇತಿಯಾಗಿರುತ್ತದೆ. ವಿದ್ಯಾರ್ಹತೆ 12ನೇ ತರಗತಿ ಉತ್ತೀರ್ಣರಾಗಿರಬೇಕು ಮತ್ತು ವಯೋಮಿತಿ 20 ರಿಂದ 45 ವರ್ಷದೊಳಗಿರಬೇಕು. ಕೊಠಡಿ ಪರಿಚಾರಕ ತರಬೇತಿಯ ಕಾಲಾವಧಿ ಮೂರು ತಿಂಗಳ ಮತ್ತು ಒಂದು ತಿಂಗಳ ಕೆಲಸದ ತರಬೇತಿಯಾಗಿದ್ದು, ವಿದ್ಯಾರ್ಹತೆ 05ನೇ ತರಗತಿ ಉತ್ತೀರ್ಣರಾಗಿರಬೇಕು ಮತ್ತು ವಯೋಮಿತಿ 20 ರಿಂದ 45 ವರ್ಷದೊಳಗಿರಬೇಕು.

ಆಸಕ್ತ ಅಭ್ಯರ್ಥಿಗಳು ಉಪನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ನಂ.54, 5ನೇ ಮಹಡಿ, ಇಂಧನ ಭವನ, ರೇಸ್ ಕೋರ್ಸ್ ರಸ್ತೆ, ರಿನೇಸನ್ಸ್ ಹೋಟೆಲ್ ಎದುರು, ಬೆಂಗಳೂರು 560009 ಇಲ್ಲಿ ಅರ್ಜಿಗಳನ್ನು ಪಡೆದು ಆಗಸ್ಟ್ 30 ರೊಳಗಾಗಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-22352929 ಗೆ ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ನಗರ ಜಿಲ್ಲೆ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular