Thursday, August 14, 2025
Google search engine

Homeಅಪರಾಧಮಂಡ್ಯದಲ್ಲಿ ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಮಂಡ್ಯದಲ್ಲಿ ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಮಂಡ್ಯ: ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಇದೀಗ ಮಂಡ್ಯದಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿ ಹೃದಯಾಘತದಿಂದ ಮೃತಪಟ್ಟಿದ್ದಾನೆ.

ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಕರೋಟಿ ಗ್ರಾಮದ 21 ವರ್ಷದ ನವೀನ್ ಮೃತಪಟ್ಟ ವಿದ್ಯಾರ್ಥಿ. ಬೆಂಗಳೂರಿನ ಕಾಲೇಜ್ ವೊಂದರಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ನವೀನ್ ರಜೆ ಇದ್ದ ಕಾರಣ ಊರಿಗೆ ಬಂದಿದ್ದ. ಮನೆಯಲ್ಲಿ ಇದ್ದಾಗಲೇ ಎದೆನೋವಿನಿಂದ ಕುಸಿದುಬಿದ್ದು ಹೃದಯಘಾತದಿಂದ ಮೃತಪಟ್ಟಿದ್ದಾರೆ.

ಕೂಡಲೇ ಪೋಷಕರು ಕಿಕ್ಕೇರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ಚನ್ನರಾಯಪಟ್ಟಣಕ್ಕೆ ಕರೆದುಕೊಂಡು ಹೋಗುವಂತೆ ಹೇಳಿದ್ದು, ಚನ್ನರಾಯಪಟ್ಟಣಕ್ಕೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲೇ ನವೀನ್ ಮೃತಪಟ್ಟಿದ್ದಾರೆ.

RELATED ARTICLES
- Advertisment -
Google search engine

Most Popular