Thursday, August 14, 2025
Google search engine

Homeಅಪರಾಧರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪವಿತ್ರಾ ಗೌಡ ಬಂಧನದ ನಂತರ ದರ್ಶನ್ ಆಪ್ತ ಪ್ರದೋಶ್ ಹಾಗೂ ಲಕ್ಷ್ಮಣ...

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪವಿತ್ರಾ ಗೌಡ ಬಂಧನದ ನಂತರ ದರ್ಶನ್ ಆಪ್ತ ಪ್ರದೋಶ್ ಹಾಗೂ ಲಕ್ಷ್ಮಣ ಬಂಧನ

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳ ಜಾಮೀನು ರದ್ದಾದ ಬೆನ್ನಲ್ಲೇ A1 ಆರೋಪಿ ಪವಿತ್ರಗೌಡಳನ್ನು ಅರೆಸ್ಟ್ ಮಾಡಿದ ಬೆನ್ನಲ್ಲೆ, ನಟ ದರ್ಶನ್‌ ಆಪ್ತ A14 ಆರೋಪಿ ಪ್ರದೋಶ್ ಹಾಗು ನಟ ದರ್ಶನ್ ಕಾರು ಚಾಲಕ A12 ಲಕ್ಶ್ಮಣನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ಸ್‌ಪೆಕ್ಟರ್ ಸುಬ್ರಮಣ್ಯ ಮತ್ತು ತಂಡ ಆತನನ್ನು ಬಂಧಿಸಿದೆ.

ಕೊಲೆ ಆರೋಪಿಗಳ ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಗುರುವಾರ ಬೆಳಗ್ಗೆ ಮಹತ್ವದ ತೀರ್ಪು ನೀಡಿತ್ತು. ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಈ ಆದೇಶದ ಬೆನ್ನಲ್ಲೇ ಪ್ರದೂಷ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಎಲ್ಲರೂ ಸರೆಂಡರ್ ಆಗಬೇಕು. ಆರೋಪಿ ಎಷ್ಟೇ ದೊಡ್ಡವನಾಗಿದ್ದರೂ, ಅವನು ಅಥವಾ ಅವಳು ಕಾನೂನಿಗಿಂತ ಮೇಲಲ್ಲ ಎಂಬ ಸಂದೇಶವನ್ನು ಇದು ನೀಡುತ್ತದೆ. ಯಾವುದೇ ಮಟ್ಟದಲ್ಲಿ ನ್ಯಾಯ ವಿತರಣಾ ವ್ಯವಸ್ಥೆಯು ಯಾವುದೇ ಬೆಲೆ ತೆತ್ತಾದರೂ ಕಾನೂನಿನ ನಿಯಮವನ್ನು ಕಾಪಾಡಿಕೊಳ್ಳಬೇಕು ಎಂಬ ಬಲವಾದ ಸಂದೇಶವನ್ನು ಇದು ಒಳಗೊಂಡಿದೆ. ಯಾವುದೇ ವ್ಯಕ್ತಿ ಕಾನೂನಿಗಿಂತ ಮೇಲಲ್ಲ ಅಥವಾ ಅದಕ್ಕಿಂತ ಕೆಳಗಿಲ್ಲ.

ನಾವು ಅದನ್ನು ಪಾಲಿಸುವಾಗ ಯಾರ ಅನುಮತಿಯನ್ನೂ ಕೇಳುವುದಿಲ್ಲ. ಎಲ್ಲಾ ಸಮಯದಲ್ಲೂ ಕಾನೂನಿನ ನಿಯಮವನ್ನು ಕಾಪಾಡಿಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದು ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ ಆದೇಶದಲ್ಲಿ ತಿಳಿಸಿದ್ದರು. ಈ ಆದೇಶದ ಬೆನ್ಬಲ್ಲೇ ದರ್ಶನ್‌ ಸಹ ಇಂದು (ಆ.14) ನ್ಯಾಯಾಲಯಕ್ಕೆ ಶರಣಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

RELATED ARTICLES
- Advertisment -
Google search engine

Most Popular